×
Ad

ಕಾಂಗ್ರೆಸ್‌ಗೆ ಕ್ರಿಯಾಶೀಲ ಯುವನಾಯಕನ ಅಗತ್ಯವಿದೆ: ಅಮರೀಂದರ್ ಸಿಂಗ್

Update: 2019-07-06 20:17 IST

ಅಮೃತಸರ, ಜು.6: ಭಾರತಕ್ಕೆ ಯುವ ನಾಯಕನ ಅಗತ್ಯವಿರುವುದನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲು ಮತ್ತೊಬ್ಬ ಕ್ರಿಯಾಶೀಲ ಯುವ ನಾಯಕನನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾ. ಅಮರೀಂದರ್ ಸಿಂಗ್ ಹೇಳಿದ್ದಾರೆ.

ಪಕ್ಷದ ಅಧ್ಯಕ್ಷತೆಯನ್ನು ತ್ಯಜಿಸುವ ರಾಹುಲ್ ಗಾಂಧಿಯವರ ನಿರ್ಧಾರ ದುರದೃಷ್ಟಕರ ಎಂದ ಅವರು, ಆದರೆ ಇದೀಗ ಕಾಂಗ್ರೆಸ್ ಪಕ್ಷವನ್ನು ಹುರಿದುಂಬಿಸಲು, ತಳಮಟ್ಟದ ಕಾರ್ಯಕರ್ತರೊಂದಿಗೆ ಸಂಪರ್ಕ ಇರುವ ಯುವ ನಾಯಕನನ್ನು ಆಯ್ಕೆ ಮಾಡಬೇಕಿದೆ ಎಂದರು.

2017ರಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ರಾಹುಲ್ ಗಾಂಧಿ, ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕಳಪೆ ಸಾಧನೆಯ ಹಿನ್ನೆಲೆಯಲ್ಲಿ ಪಕ್ಷಾಧ್ಯಕ್ಷತೆಗೆ ರಾಜೀನಾಮೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News