ದೈಹಿಕ ಶಿಕ್ಷಕನಿಂದ ವಿದ್ಯಾರ್ಥಿಗೆ ಏಟು: ಮಕ್ಕಳ ಕಲ್ಯಾಣ ಸಮಿತಿಗೆ ವರದಿ

Update: 2019-07-06 15:29 GMT

ಕುಂದಾಪುರ, ಜು.6: ಬೀಜಾಡಿ ಪಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕರು ಅಲ್ಲಿನ ವಿದ್ಯಾರ್ಥಿ ವಿಘ್ನೇಶ್ ಎಂಬಾತನಿಗೆ ಹೊಡೆದ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಇಂದು ಸಮಗ್ರ ವರದಿಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಮೂಲಕ ಮಕ್ಕಳ ಕಲ್ಯಾಣ ಸಮಿತಿಗೆ ಸಲ್ಲಿಸಿದೆ.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್ಯ ಶಾಲೆಗೆ ತೆರಳಿ ವಿದ್ಯಾರ್ಥಿ ವ್ನಿೇಶ್, ತಾಯಿ ಶೋಭಾ ಹಾಗೂ ಶಾಲಾ ಎಸ್‌ಡಿಎಂಸಿ ಪದಾಧಿಕಾರಿಗಳು ಹಾಗೂ ಶಿಕ್ಷಕರು ಮತ್ತು ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಯವರಿಂದ ಹೇಳಿಕೆ ಪಡೆದು ಸಮಗ್ರ ವರದಿಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದಯಾನಂದ ಅವರಿಗೆ ಸಲ್ಲಿಸಿದ್ದಾರೆ.

ದಯಾನಂದ ಈ ಕುರಿತು ಸೂಕ್ತ ಕ್ರಮಕೈಗೊಳ್ಳುವಂತೆ ಉಡುಪಿ ಮಕ್ಕಳ ಕಲ್ಯಾಣ ಸಮಿತಿಗೆ ವರದಿ ನೀಡಿದ್ದಾರೆ. ಮುಂದೆ ಈ ಬಗ್ಗೆ ಸಮಿತಿ ಪರಿಶೀಲನೆ ನಡೆಸಿ ದೈಹಿಕ ಶಿಕ್ಷಕರ ವಿರುದ್ಧ ಕ್ರಮಕೈಗೊಳ್ಳುವ ಬಗ್ಗೆ ನಿರ್ಧರಿಸಲಿದೆ ಎಂದು ಮೂಲಗಳು ತಿಳಿಸಿವೆ.

ಈ ಪ್ರಕರಣಕ್ಕೆ ಸಂಬಂಧ ಶಾಲೆಯಲ್ಲಿ ಸಭೆ ಕರೆಯಲಾಗಿದ್ದು, ಉತ್ತಮ ದೈಹಿಕ ಶಿಕ್ಷಕರಾಗಿ ಈವರೆಗೆ ಕರ್ತವ್ಯ ನಿರ್ವಹಿಸಿದ್ದ ದೈಹಿಕ ಶಿಕ್ಷಕ ಉಮೇಶ್ ಶೆಟ್ಟಿ ವಿರುದ್ಧ ಕೇಸು ದಾಖಲಿಸುವ ಬದಲು ಅವರನ್ನು ಇಲ್ಲಿಂದ ವರ್ಗಾವಣೆ ಮಾಡುವಂತೆ ಒತ್ತಾಯಗಳು ಕೇಳಿಬಂದವು. ಈ ಸಭೆಯಲ್ಲಿ ಬಾಲಕನ ತಾಯಿ ಶೋಭಾ, ಎಸ್‌ಡಿಎಂಸಿ ಪದಾಧಿಕಾರಿಗಳು, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್ ಮೊದಲಾದವರು ಹಾಜರಿದ್ದರು.

ಜು.5ರಂದು ಬೆಳಗ್ಗೆ ಐದನೆ ತರಗತಿಯ ವಿದ್ಯಾರ್ಥಿ ವ್ನಿೇಶ್‌ಗೆ ಅದೇ ಶಾಲೆಯ ದೈಹಿಕ ಶಿಕ್ಷಣ ಉಮೇಶ್ ಶೆಟ್ಟಿ ಅಳತೆ ಕೋಲಿನಿಂದ ಹೊಡೆದಿದ್ದು, ಇದರಿಂದ ಬಾಲಕನ ಬೆನ್ನಿನಲ್ಲಿ ಬಾಸುಂಡೆ ಎದ್ದಿತ್ತು. ಬೆನ್ನಿನ ರಕ್ತ ಹೆಪ್ಪುಗಟ್ಟಿರುವ ಹಿನ್ನೆಲೆಯಲ್ಲಿ ಬಾಲಕನಿಗೆ ಕೋಟೇಶ್ವರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇದರ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News