ಪುತ್ತೂರಿನ ಸಾಮೂಹಿಕ ಅತ್ಯಾಚಾರ ಖಂಡಿಸಿ ಎಬಿವಿಪಿ ಪ್ರತಿಭಟನೆ

Update: 2019-07-07 13:01 GMT

ಕೊಪ್ಪ, ಜು.7: ಪುತ್ತೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಖಂಡನೀಯವಾದದ್ದು, ಈ ಕೃತ್ಯದಲ್ಲಿ ಭಾಗಿಯಾದ ಎಲ್ಲಾ ದುಷ್ಕರ್ಮಿಗಳನ್ನು ವಿಚಾರಣೆಗೊಳಪಡಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಪ್ರತಿಭಟಿಸಿ ಎಬಿವಿಪಿ ಸಂಘಟನೆಯು ಶನಿವಾರ ತಹಶೀಲ್ದಾರ್ ಏರ್ರಿಸ್ವಾಮಿಯವರಿಗೆ ಮನವಿ ನೀಡಿದರು.

ರಾಜ್ಯಾದ್ಯಂತ ಡ್ರಗ್ಸ್ ಮಾಫಿಯಾ ದಂಧೆ ಹೆಚ್ಚಾಗಿ ನಡೆಯುತ್ತಿದ್ದು, ವಿದ್ಯಾರ್ಥಿ ಸಮುದಾಯವನ್ನು ದಾರಿ ತಪ್ಪಿಸಿ ಅಪರಾಧಿ ಚಟುವಟಿಕೆಗಳಿಗೆ ಪ್ರೇರಣೆ ನೀಡುವ ಡ್ರಗ್ಸ್ ಜಾಲ ಸಕ್ರಿಯವಾಗಿ ನಡೆಯುತ್ತಿದೆ. ಪೊಲೀಸ್ ಇಲಾಖೆ ಇಂತಹ ಜಾಲವನ್ನು ಕೂಡಲೇ ಪತ್ತೆ ಹಚ್ಚಿ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.

ಪುತ್ತೂರಿನ ಸಾಮೂಹಿಕ ಆತ್ಯಚಾರ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಎಬಿವಿಪಿಯ ಹೆಸರಿನೊಂದಿಗೆ ತಳುಕು ಹಾಕಿ ಸಂಘಟನೆಗೆ ಸಾರ್ವಜನಿಕವಾಗಿ ಕೆಟ್ಟ ಹೆಸರನ್ನು ತರಲು ವ್ಯವಸ್ಥಿತ ಷಡ್ಯಂತರವೊಂದು ನಡೆಯುತ್ತಿದೆ. ಈ ಘಟನೆಯಲ್ಲಿ ಭಾಗಿಯಾದವರು ಅಖಿಲ ಭಾರತೀಯ ವಿಧ್ಯಾರ್ಥಿ ಪರಿಷತ್ ಸಂಘಟನೆಗೆ ಸೇರಿದವರಲ್ಲ ಎಂದು ನಗರ ಕಾರ್ಯದರ್ಶಿ ಭವಿಶ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಅನಿಲ್ ಶಿವಪುರ, ಅರಣ್, ಸುಭಾಷ್, ಸುಮಿಥ್ ಸೇರಿ ಅನೇಕರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News