ಬೆಂಗಳೂರಿಗೆ ಆಗಮಿಸಿದ ಸಿಎಂ ಕುಮಾರಸ್ವಾಮಿ

Update: 2019-07-07 14:39 GMT

ಬೆಂಗಳೂರು, ಜು.7: ಪೂರ್ವ ನಿಯೋಜಿತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಆಮೇರಿಕಾ ಪ್ರವಾಸ ಕೈಗೊಂಡಿದ್ದ ಸಿಎಂ ಕುಮಾರಸ್ವಾಮಿ, ರಾಜ್ಯದ ಕ್ಷಿಪ್ರ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ರವಿವಾರ ರಾತ್ರಿ ಬೆಂಗಳೂರಿಗೆ ಹಿಂದಿರುಗಿದರು.

ವಿಶೇಷ ವಿಮಾನದ ಮೂಲಕ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕುಮಾರಸ್ವಾಮಿ ಅಲ್ಲೇ ಸಚಿವ ರೇವಣ್ಣ ಸೇರಿ ಹಲವು ಮುಖಂಡರೊಂದಿಗೆ ಸಭೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News