ಅಲ್ಪಸಂಖ್ಯಾತರ ಇಲಾಖೆಯಿಂದ ಕಾರ್ಯಕ್ರಮಗಳ ಅನುಷ್ಟಾನದ ಅಧ್ಯಯನಕ್ಕೆ ಸಮಿತಿ ರಚನೆ

Update: 2019-07-07 15:47 GMT

ಬೆಂಗಳೂರು, ಜು.7: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಜಾರಿಗೊಳಿಸುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಕಾರ್ಯಕ್ರಮಗಳ ಅನುಷ್ಟಾನದ ಪರಿಶೀಲನೆಗೆ ನೂತನ ಸಮಿತಿಯನ್ನು ರಚಿಸಿದೆ.

ಸಮಿತಿಯ ಅಧ್ಯಕ್ಷರಾಗಿ ನಿವೃತ್ತ ಐಪಿಎಸ್ ಅಧಿಕಾರಿ ಯು.ನಿಸಾರ್ ಅಹಮದ್, ಸದಸ್ಯರಾಗಿ ನಿವೃತ್ತ ಐಎಎಸ್ ಅಧಿಕಾರಿ ಅಧೋನಿ ಸೈಯ್ಯದ್ ಸಲೀಂ, ವಾರ್ತಾಭಾರತಿ ಪ್ರಧಾನ ಸಂಪಾದಕ ಅಬ್ದುಸ್ಸಲಾಂ ಪುತ್ತಿಗೆ, ಶಿಕ್ಷಣ ಕ್ಷೇತ್ರದ ಮುಹಮ್ಮದ್ ಅಲಿ ಶರೀಫ್, ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದ ನಿರ್ದೇಶಕರು ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಹಜ್ ಮತ್ತು ವಕ್ಫ್ ಸಚಿವರ ಆಪ್ತ ಕಾರ್ಯದರ್ಶಿ ಎಸ್.ಎ ಆಶ್ರಫುಲ್ ಹಸನ್ ಅವರನ್ನು ಆಯ್ಕೆ ಮಾಡಿದ್ದು, ಅಲ್ಪಸಂಖ್ಯಾತರ ಕಲ್ಯಾಣ ಹಜ್ ಮತ್ತು ವಕ್ಫ್ ಸಚಿವಾಲಯದ ಶಾಖಾಧಿಕಾರಿ ಎಂ.ಎ ಮನ್ಸೂರ ಅವರನ್ನು ಸದಸ್ಯ ಕಾರ್ಯದರ್ಶಿಯಾಗಿ ನೇಮಿಸಿದೆ.

ಸಮಿತಿಯು ಒಂದು ತಿಂಗಳ ಒಳಗಾಗಿ ಅಧ್ಯಯನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲು ಸೂಚಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News