ಗಾಂಜಾ ಮಾರಾಟ: ವಿದ್ಯಾರ್ಥಿ ಸೆರೆ

Update: 2019-07-07 16:23 GMT

ಮಂಗಳೂರು, ಜು.7: ಮಾದಕ ದ್ರವ್ಯ ಗಾಂಜಾ ಮಾರಾಟ ತಡೆಯಲು ಮಂಗಳೂರು ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ನಗರದ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿಯು ಕೇರಳದ ಪಾಲಕ್ಕಾಡ್ ಮೂಲದವನು ಎಂದು ತಿಳಿದುಬಂದಿದೆ.

ಈತನು ರವಿವಾರ ಬೆಳಗ್ಗೆ 10:30ರ ಸುಮಾರು ಆಕಾಶಭವನ ಸಮೀಪದಲ್ಲಿ ಪಲ್ಸರ್ ಬೈಕ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯಂತೆ ಪೊಲೀಸರು ಬಂಧಿಸಿದ್ದಾರೆ. ಈತನಿಂದ 300 ಗ್ರಾಂ ತೂಕದ 6,000 ರೂ. ಮೌಲ್ಯದ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ವಶಕ್ಕೆ ಪಡೆದ ಗಾಂಜಾವನ್ನು ಈತ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸರಬರಾಜು ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News