×
Ad

ಹರ್ಯಾಣ: ವ್ಯಕ್ತಿಯ ಗುಂಡಿಕ್ಕಿ ಹತ್ಯೆ

Update: 2019-07-07 22:39 IST

ಚಂಡೀಗಢ, ಜು.7: ತನ್ನ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 56 ವರ್ಷದ ರಾಜೀವ್ ಗುಪ್ತಾ ಎಂಬವರನ್ನು ಬೈಕಿನಲ್ಲಿ ಬಂದ ಮೂವರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆಮಾಡಿರುವುದಾಗಿ ಪೊಲೀಸರು ಹೇಳಿದ್ದಾರೆ.

 ಹರ್ಯಾಣದ ಕರ್ನಾಲ್ ಎಂಬಲ್ಲಿ ಈ ಘಟನೆ ನಡೆದಿದೆ. ರಾಜೀವ್ ಗುಪ್ತಾ ಆಸ್ಪತೆಯೊಂದರ ಮಾಲಕನಾಗಿದ್ದು ಶನಿವಾರ ಕಾರಿನಲ್ಲಿ ಮಾರುಕಟ್ಟೆಗೆ ತೆರಳುತ್ತಿದ್ದಾಗ ಬಟ್ಟೆಯಲ್ಲಿ ಮುಖ ಮುಚ್ಚಿಕೊಂಡ ಹಂತಕರು ಗುಂಡಿನ ದಾಳಿ ನಡೆಸಿದ್ದಾರೆ. ತೀವ್ರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ವರದಿಯಾಗಿದೆ.

 ದುಷ್ಕರ್ಮಿಗಳ ಬಂಧನಕ್ಕೆ ಎಂಟು ತಂಡಗಳನ್ನು ರಚಿಸಲಾಗಿದೆ. ಕೆಲವು ಪ್ರಾಥಮಿಕ ಮಾಹಿತಿ ಲಭಿಸಿದ್ದು ದುಷ್ಕರ್ಮಿಗಳನ್ನು ಶೀಘ್ರ ಬಂಧಿಸಲಾಗುವುದು . ಪ್ರಕರಣದ ಹಿನ್ನೆಲೆಯಲ್ಲಿ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಈ ಮಧ್ಯೆ, ಘಟನೆಯನ್ನು ಖಂಡಿಸಿರುವ ವಿಪಕ್ಷ ಕಾಂಗ್ರೆಸ್ , ಆಡಳಿತಾರೂಢ ಬಿಜೆಪಿ ರಾಜ್ಯದಲ್ಲಿ ಕಾನೂನು ಶಿಸ್ತು ಪಾಲನೆಗೆ ವಿಫಲವಾಗಿದೆ ಎಂದು ದೂರಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News