ಕುಮಾರಸ್ವಾಮಿ ರಾಜೀನಾಮೆಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಂತ ಪ್ರತಿಭಟನೆ: ಬಿಎಸ್‌ವೈ

Update: 2019-07-08 13:35 GMT

ಬೆಂಗಳೂರು, ಜು.8: ಕುಮಾರಸ್ವಾಮಿ ಅಧಿಕಾರಕ್ಕೆ ಅಂಟಿಕೊಂಡಿದ್ದಾರೆ. ಕೂಡಲೇ ಅವರ ರಾಜೀನಾಮೆಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಂತ ಪ್ರತಿಭಟನೆಗೆ ತೀರ್ಮಾನಿಸಲಾಗಿದೆ ಎಂದು ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಮಲ್ಲೇಶ್ವರಂನ ಬಿಜೆಪಿ ಮುಖ್ಯ ಕಚೇರಿಯ ಮುಂಭಾಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರಕಾರ ಶಾಸಕರ ರಾಜೀನಾಮೆ ಹಿನ್ನೆಲೆಯಲ್ಲಿ ಅಲ್ಪಮತಕ್ಕೆ ಕುಸಿದಿದೆ. ಆದರೂ, ಅವರ ಅಧಿಕಾರಕ್ಕೆ ಅಂಟಿಕೊಂಡಿದ್ದಾರೆ. ಕೂಡಲೇ ಅವರ ರಾಜೀನಾಮೆಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಂತ ಪ್ರತಿಭಟನೆಗೆ ನಡೆಸಲಾಗುವುದು ಎಂದು ಹೇಳಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News