ಮುಕ್ಕ ಚರ್ಚ್‌ನಲ್ಲಿ ಪರಿಸರ ದಿನಾಚರಣೆ

Update: 2019-07-08 13:54 GMT

ಸುರತ್ಕಲ್, ಜು.8: ಕೆಥೊಲಿಕ್ ಸಭಾ ಮಂಗಳೂರು ಪ್ರದೇಶ, ಸುರತ್ಕಲ್ ವಲಯ ಮತ್ತು ಘಟಕಗಳ ವತಿಯಿಂದ ಪರಿಸರ ಜಾಗೃತಿ ಅಭಿಯಾನದ ಪ್ರಯುಕ್ತ ಅರಣ್ಯ ಇಲಾಖೆಯ ಸಹಭಾಗಿತ್ವದೊಂದಿಗೆ ಪರಿಸರ ದಿನಾಚರಣೆಯು ಮುಕ್ಕ ಚರ್ಚ್ ವಠಾರದಲ್ಲಿ ಇತ್ತೀಚೆಗೆ ನಡೆಯಿತು.

ಮಂಗಳೂರು ಧರ್ಮಪ್ರಾಂತದ ಶ್ರೇಷ್ಠ ಗುರು ಮ್ಯಾಕ್ಸಿಂ ಎಲ್. ನೊರೊನ್ಹಾ ಅಶೀರ್ವಚನಗೈದರು. ಮುಖ್ಯಮಂತ್ರಿಯ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಗಿಡ ನೆಡುವ ಮೂಲಕ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಸಕ ಡಾ.ವೈ ಭರತ್ ಶೆಟ್ಟಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು.

ಕಿನ್ನಿಗೋಳಿ ವಲಯ ಅರಣ್ಯಾಧಿಕಾರಿ ಕೆ.ಸಿ. ಮ್ಯಾಥ್ಯು ಪರಿಸರ ಸಂರಕ್ಷಣೆ ಮತ್ತು ಮಳೆ ನೀರು ಇಂಗಿಸುವಿಕೆ ಬಗ್ಗೆ ಮಾಹಿತಿ ನೀಡಿದರು. ಕೆಥೋಲಿಕ್ ಸಭಾದ ಅಧ್ಯಾತ್ಮಿಕ ನಿರ್ದೇಶಕ ಮ್ಯಾಥ್ಯು ವಾಸ್, ಸುರತ್ಕಲ್ ವಲಯದ ಪಾವ್ಲೃ್ ಪಿಂಟೊ, ಅಧ್ಯಾತ್ಮಿಕ ನಿರ್ದೇಶಕ ಸಿರಿಲ್ ಪಿಂಟೊ, ಮಂಗಳೂರು ವಲಯ ಅರಣ್ಯಾಧಿಕಾರಿ ಪಿ.ಶ್ರೀಧರ್, ಮುಕ್ಕ ಚರ್ಚ್ ಸಮಿತಿಯ ಉಪಾಧ್ಯಕ್ಷ ರೋಶನ್ ಡಿಸೋಜ, ಕಾರ್ಯದರ್ಶಿ ಶೈಲಾ ಡಿಸೋಜ, ಕೇಂದ್ರೀಯ ಸಮಿತಿ ಅಧ್ಯಕ್ಷ ಪಾವ್ಲೃ್ ರೊಲ್ಫಿ ಡಿಕೊಸ್ತಾ, ಮುಕ್ಕ ಘಟಕದ ಅಧ್ಯಕ್ಷ ಸಂತೋಷ್ ಸಿಕ್ವೇರಾ, ಪರಿಸರ ಸಂರಕ್ಷಣಾ ಸಮಿತಿಯ ಸಂಚಾಲಕ ಹೆನ್ರಿ ವಾಲ್ಡರ್ ಉಪಸ್ಥಿತರಿದ್ದರು.

ಕೆಥೋಲಿಕ್ ಸಭಾ ಸುರತ್ಕಲ್ ವಲಯಾಧ್ಯಕ್ಷ ರಸ್ಸೆಲ್ ರೊಚ್ ಸ್ವಾಗತಿಸಿದರು. ಕೇಂದ್ರೀಯ ಕಾರ್ಯದರ್ಶಿ ನವೀನ್ ಬ್ರಾಗ್ಸ್ ವಂದಿಸಿದರು. ಮುಕ್ಕ ಘಟಕ ಕಾರ್ಯದರ್ಶಿ ಫ್ಲೇವಿ ರೊಡ್ರಿಗಸ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News