ಗಾಂಜಾ ಮಾರಾಟ: ಆರೋಪಿ ಸೆರೆ

Update: 2019-07-08 17:45 GMT

ಮಂಗಳೂರು, ಜು.8: ಗಾಂಜಾ ಮಾರಾಟ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಮಂಗಳೂರು ಪೊಲೀಸರು ಸೋಮವಾರ ಬಂಧಿಸಿ, ಸೊತ್ತನ್ನು ವಶಕ್ಕೆ ಪಡೆದಿದ್ದಾರೆ.

ಮೂಲತಃ ಬಂದರ್ ಅನ್ಸಾರಿ ಕ್ರಾಸ್‌ರೋಡ್ ನಿವಾಸಿ, ಹಾಲಿ ಅಡ್ಡೂರುನೂಯಿ ಪ್ರದೇಶದ ಕಂಡಿ ರಹೀಂ ಯಾನೆ ಗೂಡ್ಸ್ ರಹೀಂ (44) ಬಂಧಿತ ಆರೋಪಿ.

ಘಟನೆ ವಿವರ: ಸೋಮವಾರ ಮಂಗಳೂರು ನಗರದ ಪಾಂಡೇಶ್ವರದ ಖಾಸಗಿ ಕಾಲೇಜು ಸಮೀಪದ ಗ್ಯಾರೇಜೊಂದರ ಬಳಿ ಆರೋಪಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿಯಂತೆ ಇಕನಾಮಿಕ್ ಆ್ಯಂಡ್ ನಾರ್ಕೋಟಿಕ್ಸ್ ಕ್ರೈಂ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಯಿಂದ ಒಂದು ಕೆ.ಜಿ 100 ಗ್ರಾಂ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ ಆಕ್ಟಿವಾ ಹೋಂಡಾ, ಮೊಬೈಲ್ ಪೋನ್ ಹಾಗೂ ಡಿಜಿಟಲ್ ತೂಕ ಮಾಪನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳೂರು ನಗರದ ವಿವಿಧ ಠಾಣೆಗಳಲ್ಲಿ ಆರೋಪಿ ವಿರುದ್ಧ ಈಗಾಗಲೇ 11 ಗಾಂಜಾ ಸಾಗಾಟ, ಮಾರಾಟಕ್ಕೆ ಸಂಬಂಧಿಸಿದ ಪ್ರಕರಣಗಳು ದಾಖಲಾಗಿವೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ನಿರ್ದೇಶನದಂತೆ ಡಿಸಿಪಿಗಳಾದ ಹನುಮಂತರಾಯ, ಲಕ್ಷ್ಮೀಗಣೇಶ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಕನಾಮಿಕ್ ಆ್ಯಂಡ್ ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಮಕೃಷ್ಣ ಕೆ.ಕೆ. ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News