ಶಾಸಕರ ರಾಜೀನಾಮೆಯ ಹಿಂದೆ ಸಿದ್ದರಾಮಯ್ಯ ಕೈವಾಡವಿದೆ: ಕೆ.ಎಸ್.ಈಶ್ವರಪ್ಪ

Update: 2019-07-08 18:40 GMT

ಶಿವಮೊಗ್ಗ, ಜು. 8: ರಾಜ್ಯದಲ್ಲಿ ಮೈತ್ರಿ ಸರ್ಕಾರ ಉಳಿಯುವುದಿಲ್ಲ. ಶಾಸಕರ ರಾಜೀನಾಮೆಯ ಹಿಂದೆ ಸಿದ್ದರಾಮಯ್ಯರವರ ಕೈವಾಡವಿದೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ. 

ಸೋಮವಾರ ನಗರದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಆರಂಭದಿಂದಲೂ ಮೈತ್ರಿ ಸರ್ಕಾರದ ಶಾಸಕರ ನಡುವೆ ಭಿನ್ನಾಭಿಪ್ರಾಯಗಳಿತ್ತು. ಅದನ್ನು ನಿರ್ಲಕ್ಷಿಸಿ ಸರ್ಕಾರ ಮುಂದುವರೆದಿದೆ. ಅದರ ಫಲಿತಾಂಶವಾಗಿ ಇಂದು 13 ಶಾಸಕರು ರಾಜೀನಾಮೆ ನೀಡಿದ್ದಾರೆ ಎಂದರು.

ರಾಮಲಿಂಗರೆಡ್ಡಿ, ವಿಶ್ವನಾಥ್‍ರಂತಹ ಹಿರಿಯ ಶಾಸಕರನ್ನು ಬಿಜೆಪಿ ಸೆಳೆಯುವ ಪ್ರಶ್ನೆಯೇ ಇಲ್ಲ. ಎಲ್ಲ ಶಾಸಕರು ಒಂದಾಗಿ ಮೈತ್ರಿ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ಇದು ಸಿದ್ದರಾಮಯ್ಯನವರ ತಂತ್ರಗಾರಿಕೆ ಎಂಬುದರಲ್ಲಿ ಅನುಮಾನವಿಲ್ಲ ಎಂದು ತಿಳಿಸಿದರು.  

ಆದರೆ ಸಿದ್ದರಾಮಯ್ಯನವರು ಬಿಜೆಪಿ ಪಕ್ಷದ ವಿರುದ್ಧ ದೂರುತ್ತಿದ್ದಾರೆ. ಇದರಲ್ಲಿ ಯಾವುದೇ ಹುರುಳಿಲ್ಲವೆಂದರು. ಮೈತ್ರಿ ಸರ್ಕಾರ ಈ ಅಧಿವೇಶನದ ಅವಧಿಯಲ್ಲ ಪೂರೈಸುವುದಿಲ್ಲವೆಂದು ಹೇಳಿದರು. 

ಇಂದು ಸಂಜೆ ಬೆಂಗಳೂರಿನಲ್ಲಿ ಬಿಜೆಪಿ ಶಾಸಕಾಂಗ ಸಭೆ ಆಯೋಜಿಸಲಾಗುತ್ತಿದೆ. ಈ ಸಭೆಯಲ್ಲಿ ಮುಂದಿನ ಕಾರ್ಯತಂತ್ರದ ಬಗ್ಗೆ ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News