Breaking News- ವಿಟ್ಲದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ

Update: 2019-07-09 11:46 GMT

ಬಂಟ್ವಾಳ, ಜು.9: ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳ ಮೇಲೆಯ ಗ್ರಾಮ ಪಂಚಾಯತ್ ಸಿಬ್ಬಂದಿ ಸಹಿತ ಐವರು ಅತ್ಯಾಚಾರ ಎಸಗಿರುವ ಪ್ರತ್ಯೇಕ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ.

ಸಂತ್ರಸ್ತ ಬಾಲಕಿ ಇದೀಗ ಗರ್ಭವತಿಯಾಗಿದ್ದಾಳೆ ಎಂದು ತಿಳಿದುಬಂದಿದೆ. ಈ ಸಂಬಂಧ ಆರೋಪಿಗಳ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ವಿಟ್ಲ ಸಮೀಪದ ನಿವಾಸಿಯಾಗಿರುವ 17 ವರ್ಷದ ಬಾಲಕಿ ಮೇಲೆ ಈ ಕೃತ್ಯ ನಡೆದಿದೆ.

 ಎಸೆಸೆಲ್ಸಿ ವಿದ್ಯಾಭ್ಯಾಸ ಮುಗಿಸಿ ಮನೆಯಲ್ಲಿದ್ದಳು. ಗ್ರಾಮ ಪಂಚಾಯತ್ ಸಿಬ್ಬಂದಿ ಸೇರಿದಂತೆ ಐವರು ಈಕೆಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದುಬಂದಿದೆ.

ಇದೀಗ ಬಾಲಕಿ 6 ತಿಂಗಳ ಗರ್ಭಿಣಿಯಾಗಿದ್ದು, ಈ ಬಗ್ಗೆ ಯಾರಲ್ಲೂ ಹೇಳದಂತೆ ಆರೋಪಿಗಳು ಬೆದರಿಕೆ ಹಾಕಿದ್ದರೆನ್ನಲಾಗಿದೆ.

ಆಶಾ ಕಾರ್ಯಕರ್ತೆ ಮನೆಗೆ ಭೇಟಿ ನೀಡಿದಾಗ ಕೃತ್ಯ ಬೆಳಕಿಗೆ ಬಂದಿದೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ವಿಟ್ಲ ಪೊಲಿಸರು ತನಿಖೆ ಮುಂದುವರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News