ವಿಶ್ವಕಪ್ ಸೆಮಿ ಫೈನಲ್‌ಗೆ ಮಳೆ ಅಡ್ಡಿ: ನ್ಯೂಝಿಲ್ಯಾಂಡ್ 211/5

Update: 2019-07-09 13:28 GMT

ಮ್ಯಾಂಚೆಸ್ಟರ್, ಜು.9: ಭಾರತ ಹಾಗೂ ನ್ಯೂಝಿಲ್ಯಾಂಡ್ ನಡುವೆ ಮಂಗಳವಾರ ನಡೆದ ವಿಶ್ವಕಪ್ ಸೆಮಿ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ.

ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಾಗ ನ್ಯೂಝಿಲ್ಯಾಂಡ್ 46.1 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 211 ರನ್ ಗಳಿಸಿತ್ತು. ರಾಸ್ ಟೇಲರ್(ಔಟಾಗದೆ 67, 85 ಎಸೆತ, 3 ಬೌಂಡರಿ, 1 ಸಿಕ್ಸರ್) ಹಾಗೂ ಟಾಮ್ ಲಥಾಮ್(ಔಟಾಗದೆ 3)ಕ್ರೀಸ್ ಕಾಯ್ದುಕೊಂಡಿದ್ದರು.

ಟಾಸ್ ಜಯಿಸಿದ ಕಿವೀಸ್ ನಾಯಕ ಕೇನ್ ವಿಲಿಯಮ್ಸನ್ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಆರಂಭದಲ್ಲಿ ರನ್ ಗಳಿಸಲು ಪರದಾಟ ನಡೆಸಿದ ಕಿವೀಸ್ 3.3 ಓವರ್‌ಗಳಲ್ಲಿ ಕೇವಲ 1 ರನ್ ಗಳಿಸಿದ್ದಾಗ ಆರಂಭಿಕ ಆಟಗಾರ ಗಪ್ಟಿಲ್ ವಿಕೆಟನ್ನು ಕಳೆದುಕೊಂಡಿತು.

ಆಗ ನಿಕೊಲ್ಸ್ ಹಾಗೂ ಟೇಲರ್‌ರೊಂದಿಗೆ ಕೈ ಜೋಡಿಸಿದ ವಿಲಿಯಮ್ಸನ್ ಕ್ರಮವಾಗಿ 2ನೇ ಹಾಗೂ 3ನೇ ವಿಕೆಟ್ ಜೊತೆಯಾಟದಲ್ಲಿ 68 ಹಾಗೂ 65 ರನ್ ಸೇರಿಸಿ ತಂಡವನ್ನು ಆಧರಿಸಿದರು. ಟೂರ್ನಿಯಲ್ಲಿ 4ನೇ ಬಾರಿ 50ಕ್ಕೂ ಅಧಿಕ ರನ್ ಗಳಿಸಿದ ವಿಲಿಯಮ್ಸನ್ ಸ್ಪಿನ್ನರ್ ಚಹಾಲ್ ಎಸೆತದಲ್ಲಿ ಜಡೇಜಗೆ ಸುಲಭ ಕ್ಯಾಚ್ ನೀಡಿ ನಿರ್ಗಮಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News