×
Ad

ಪಶ್ಚಿಮಬಂಗಾಳದ ಕಾಂಗ್ರೆಸ್ ವರಿಷ್ಠ ಹುದ್ದೆಗೆ ಸೋಮನ್ ಮಿತ್ರಾ ರಾಜೀನಾಮೆ

Update: 2019-07-09 19:45 IST

ಕೋಲ್ಕತಾ, ಜು. 9: ಲೋಕಸಭಾ ಚುನಾವಣೆಯಲ್ಲಿ ಪಕ್ಷದ ವೈಫಲ್ಯದ ಹೊಣೆ ಹೊತ್ತು ಪಶ್ಚಿಮಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಸೋಮನ್ ಮಿತ್ರಾ ತನ್ನ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ.

ಆದರೆ, ಮಿತ್ರಾ ಅವರ ರಾಜೀನಾಮೆ ಸ್ವೀಕರಿಸಲು ರಾಜ್ಯದಲ್ಲಿ ಪಕ್ಷದ ವ್ಯವಹಾರಗಳ ಎಐಸಿಸಿ ಉಸ್ತುವಾರಿ ಗೌರವ್ ಗೊಗೋಯಿ ನಿರಾಕರಿಸಿದ್ದಾರೆ. ಅಲ್ಲದೆ, ಹುದ್ದೆಯಲ್ಲಿ ಮುಂದುವರಿಯುವಂತೆ ಮನವಿ ಮಾಡಿದ್ದಾರೆ.

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮಬಂಗಾಳದ 42 ಸ್ಥಾನಗಳಲ್ಲಿ ಕೇವಲ 2 ಸ್ಥಾನಗಳನ್ನು ಮಾತ್ರ ಪಡೆಯುವಲ್ಲಿ ಕಾಂಗ್ರೆಸ್ ಸಫಲವಾಗಿತ್ತು. 2014ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 4 ಸ್ಥಾನಗಳನ್ನು ಪಡೆದಿತ್ತು.

ಲೋಕಸಭಾ ಚುನಾವಣೆಯಲ್ಲಿ ಪಕ್ಷದ ವಿಫಲತೆಗೆ ತಾನು ಹೊಣೆಗಾರ. ಪಕ್ಷದ ಭವಿಷ್ಯದ ಬೆಳವಣಿಗೆಗೆ ಈ ಉತ್ತರದಾಯಿತ್ವ ನಿರ್ಣಾಯಕ ಎಂದು ಕಳೆದ ವಾರ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿ ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News