ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2019-07-09 14:56 GMT

ಬೆಂಗಳೂರು, ಜು.9: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತೆ ಎಂ.ಕನಗವಲ್ಲಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿಯನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಬಳ್ಳಾರಿಯ ಹಂಪಿ ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಆಯುಕ್ತೆ ಜಿ.ಆರ್.ಜೆ.ದಿವ್ಯಾ ಪ್ರಭು ಅವರನ್ನು ರಾಜ್ಯ ಲೋಕಸೇವಾ ಆಯೋಗ(ಕೆಪಿಎಸ್ಸಿ)ದ ಪರೀಕ್ಷಾ ನಿಯಂತ್ರಕರನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News