ಉಡುಪಿ: ಜು.10ರಂದು ಕಾಂಗ್ರೆಸ್ ಪ್ರತಿಭಟನೆ
Update: 2019-07-09 20:37 IST
ಉಡುಪಿ, ಜು.9: ರಾಜ್ಯ ಸರಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಷಡ್ಯಂತ್ರದ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ನಾಳೆ ಜು.10ರಂದು ಬೆಳಗ್ಗೆ 10:30ಕ್ಕೆ ಬೃಹತ್ ಪ್ರತಿಭಟನೆ ನಡೆಯಲಿದೆ.
ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಬಳಿ ನಡೆಯುವ ಈ ಪ್ರತಿಭಟನಾ ಸಭೆಯಲ್ಲಿ ಪಕ್ಷದ ಎಲ್ಲಾ ಕಾರ್ಯಕರ್ತರು ಪಾಲ್ಗೊಳ್ಳ ಬೇಕೆಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕಕುಮಾರ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.