ಗಣಕ ಯಂತ್ರದಲ್ಲಿ ಕನ್ನಡ ಬಳಕೆ: ಪಿಪಿಸಿಯಲ್ಲಿ ಜು.13ಕ್ಕೆ ಕಾರ್ಯಾಗಾರ
Update: 2019-07-09 21:46 IST
ಉಡುಪಿ, ಜು.9: ಪೂರ್ಣಪ್ರಜ್ಞ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ಕನ್ನಡ ವಿದ್ಯಾರ್ಥಿಗಳಿಗಾಗಿ ಗಣಕ ಯಂತ್ರದಲ್ಲಿ ಕನ್ನಡ ಬಳಕೆಯ ಸಾಧ್ಯತೆಗಳು ಎಂಬ ವಿಷಯದ ಮೇಲೆ ಒಂದು ದಿನದ ಕಾರ್ಯಾಗಾರವನ್ನು ಜು.13ರ ಶನಿವಾರ ಕಾಲೇಜಿನ ಮಿನಿ ಅಡಿಟೋರಿಯಂನಲ್ಲಿ ಆಯೋಜಿಸಲಾಗಿದೆ.
ಮಂಗಳೂರು ವಿವಿ ಮಟ್ಟದಲ್ಲಿ ನಡೆಯಲಿರುವ ಈ ಕಾರ್ಯಾಗಾರವನ್ನು 13ರ ಬೆಳಗ್ಗೆ 9:30ಕ್ಕೆ ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಉದ್ಘಾಟಿಸಲಿದ್ದು, ಹಿರಿಯ ಛಾಯಾಚಿತ್ರ ಪತ್ರಕರ್ತ ಆಸ್ಟ್ರೋಮೋಹನ್ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಡಾ.ರಾಘವೇಂದ್ರ ಎ.ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.