ಟ್ಯಾಲೆಂಟ್ ವತಿಯಿಂದ ಅಳೇಕಲ ಮದನಿ ಕಾಲೇಜಿನಲ್ಲಿ ವನಮಹೋತ್ಸವ

Update: 2019-07-09 17:44 GMT

ಮಂಗಳೂರು, ಜು. 9: ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ಮತ್ತು ಮದನಿ ಪ.ಪೂ ಕಾಲೇಜು ಅಳೇಕಲ ಹಾಗೂ ಮದನಿ ಎಜುಕೇಶನಲ್ ಅಸೋಸಿಯೇಷನ್, ಅಳೇಕಲ, ಉಳ್ಳಾಲ ಇವರ ಜಂಟಿ ಆಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮವು ಅಳೇಕಲ ಮದನಿ ಪ.ಪೂ ಕಾಲೇಜಿನಲ್ಲಿ ನಡೆಯಿತು.

ಮದನಿ ಪ.ಪೂ ಕಾಲೇಜು ಹಾಗೂ ಪ್ರೌಢ ಶಾಲಾ ಸಂಚಾಲಕ ಯು.ಎನ್. ಇಬ್ರಾಹಿಂ ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮದನಿ ಪ.ಪೂ.ಕಾಲೇಜಿನ ಪ್ರಾಂಶುಪಾಲ ಇಸ್ಮಾಯಿಲ್ ಟಿ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಟಿ.ಆರ್.ಎಫ್ ಅಧ್ಯಕ್ಷ ರಿಯಾಝ್ ಕಣ್ಣೂರು, ಮದನಿ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಪಿ ಇಬ್ರಾಹಿಂ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಜಯಂತಿ ಉಪಸ್ಥಿತರಿದ್ದರು.

ಟಿ.ಆರ್.ಎಫ್ ಸಲಹೆಗಾರ ರಫೀಕ್ ಮಾಸ್ಟರ್ ವನಮಹೋತ್ಸವದ ಮಹತ್ವದ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕ ಹಬೀಬ್ ರಹ್ಮಾನ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

ಶಾರೀರಿಕ ಶಿಕ್ಷಣ ಉಪನ್ಯಾಸಕ ಅಶ್ರಫ್ ವಂದಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪನ್ಯಾಸಕ ವರ್ಗ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದು, ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಮನೆಯಲ್ಲಿ ನೆಟ್ಟು ಬೆಳೆಸಲು ಗಿಡಗಳನ್ನು ವಿತರಿಸಲಾಯಿತು.    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News