ಕರ್ನಾಟಕದಲ್ಲಿ ರಾಜಕೀಯ ಬಿಕ್ಕಟ್ಟು: ಲೋಕಸಭೆಯಲ್ಲಿ ಘೋಷಣೆ ಕೂಗಿದ ರಾಹುಲ್

Update: 2019-07-09 18:51 GMT

ಹೊಸದಿಲ್ಲಿ,ಜು.9: ಕರ್ನಾಟಕದಲ್ಲಿಯ ರಾಜಕೀಯ ಬೆಳವಣಿಗೆಗಳ ಕುರಿತಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಲೋಕಸಭೆಯಲ್ಲಿಘೋಷಣೆಗಳನ್ನು ಕೂಗಿದರು.

ಅವರು 17ನೇ ಲೋಕಸಭೆಯಲ್ಲಿ ಘೋಷಣೆಗಳನ್ನು ಕೂಗಿದ್ದು ಇದೇ ಮೊದಲ ಬಾರಿಯಾಗಿದೆ.

ಸದನದಲ್ಲಿ ಕರ್ನಾಟಕದ ಬಿಕ್ಕಟ್ಟನ್ನು ಪ್ರಸ್ತಾಪಿಸಿದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧುರಿ ಅವರು ಬಿಜೆಪಿಯು ರಾಜ್ಯದ ಕಾಂಗ್ರೆಸ್ ಶಾಸಕರನ್ನು ಬೇಟೆಯಾಡುತ್ತಿದೆಎಂದು ಆರೋಪಿಸಿದರು.

 ಆದರೆ ಸ್ಪೀಕರ್ ಓಂ ಬಿರ್ಲಾ ಅವರು ಚೌಧುರಿಯವರು ಮಾತು ಮಂದುವರಿಸಲು ಅವಕಾಶ ನೀಡಲಿಲ್ಲ. ಈ ವಿಷಯವನ್ನು

ಸೋಮವಾರ ಸದನವು ಚರ್ಚಿಸಿದೆ ಮತ್ತು ಲೋಕಸಭೆಯ ಉಪನಾಯಕ ರಾಜನಾಥ ಸಿಂಗ್ ಅವರು ಆರೋಪಗಳಿಗೆ ಉತ್ತರಿಸಿದ್ದಾರೆ ಎಂದು ಅವರು ತಿಳಿಸಿದರು.

ಪ್ರಜಾಪ್ರಭುತ್ವವನ್ನು ರಕ್ಷಿಸುವುದು ನಿಮ್ಮ ಕರ್ತವ್ಯವಾಗಿದೆ ಎಂದು ಕಾಂಗ್ರೆಸ್ ಸದಸ್ಯರೋರ್ವರು ಸ್ಪೀಕರ್ ಅವರನ್ನು ಉದ್ದೇಶಿಸಿ 

ಹೇಳಿದರು.

ಸ್ಪೀಕರ್ ಸೂಚನೆಯಿಂದ ಸಮಾಧಾನಗೊಳ್ಳದ ಚೌಧುರಿ ಮತ್ತೆ ವಿಷಯವನ್ನು ಪ್ರಸ್ತಾಪಿಸಲು ಪ್ರಯತ್ನಿಸಿದರು. ಅವರ ಸೂಚನೆಯಂತೆ ಪಕ್ಷದ ಸಹಸದಸ್ಯರು ಘೋಷಣೆಗಳನ್ನುಕೂಗತೊಡಗಿದಾಗ ರಾಹುಲ್ ಕೂಡ ಅವರೊಂದಿಗೆ ಸೇರಿಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News