ಕೋಲಾರ: ಬಿಜೆಪಿ ವಿರುದ್ಧ ಜೆಡಿಎಸ್ ಪ್ರತಿಭಟನೆ

Update: 2019-07-10 07:52 GMT

ಕೋಲಾರ, ಜು.10: ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಭಾರತೀಯ ಜನತಾ ಪಕ್ಷ ವಾಮ ಮಾರ್ಗ ಅನುಸರಿಸುತ್ತಿದೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಇಂದು ಬೆಳಗ್ಗೆ ಕೋಲಾರದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

ಜೆಡಿಎಸ್ ಕಾರ್ಯಕರ್ತರು ಇಲ್ಲಿನ ಸರ್ಕಾರಿ ಕಾಲೇಜು ವೃತ್ತದಿಂದ ಹಳೆ ಬಸ್ ನಿಲ್ದಾಣದ ಮಾರ್ಗವಾಗಿ ಮೆಕ್ಕೆ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಮೆಕ್ಕೆ ವೃತ್ತದಲ್ಲಿ ಮಾನವ ಸರಪಳಿಯನ್ನು ನಿರ್ಮಿಸಿ ಕೇಂದ್ರ ಸರ್ಕಾರದ ವಿರುದ್ದ ಹಾಗೂ ಬಿಜೆಪಿ ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗಿದರು. ಸಾವಿರ ಕೋಟಿ ರೂಪಾಯಿಗಳ ಖರ್ಚು ಮಾಡಿ ಶಾಸಕರನ್ನು ಖರೀದಿ ಮಾಡಲು ಕುದುರೆ ವ್ಯಾಪಾರವನ್ನು ಬಿಜೆಪಿ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News