ರಾಜ್ಯಪಾಲರನ್ನು ಭೇಟಿಯಾದ ರಾಜ್ಯ ಬಿಜೆಪಿ ನಾಯಕರು

Update: 2019-07-10 08:27 GMT

ಬೆಂಗಳೂರು, ಜು.10: ಹದಿನಾಲ್ಕು ಶಾಸಕರ ರಾಜೀನಾಮೆಯಿಂದಾಗಿ ಬಹುಮತ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ   ಮುಖ್ಯ ಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ರಾಜೀನಾಮೆ ನೀಡುವಂತೆ ಆಗ್ರಹಿಸಿ ರಾಜ್ಯ ಬಿಜೆಪಿ ನಾಯಕರು ವಿಧಾನಸೌಧದ ಬಳಿ ಧರಣಿ ನಡೆಸಿದರು.
   ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ನಾಯಕರು ವಿಧಾನಸೌಧ ಪಕ್ಕದ ಮಹಾತ್ಮ ಗಾಂಧಿ ಪ್ರತಿಮೆಯ ಮುಂದೆ ಧರಣಿ ನಡೆಸಿ ಬಹುಮತ ಕಳೆದುಕೊಂಡಿದ್ದರೂ ಎಚ್ ಡಿ ಕುಮಾರಸ್ವಾಮಿ ಅವರು  ಮುಖ್ಯ ಮಂತ್ರಿ ಕುರ್ಚಿಗೆ ಅಂಟಿಕೊಂಡಿದ್ದಾರೆ ಎಂದು ಆರೋಪಿಸಿದರು.
ಬಳಿಕ ಬಿಜೆಪಿ ನಾಯಕರು ರಾಜಭವನಕ್ಕೆ ತರೆಳಿ ರಾಜ್ಯಪಾಲ ವಜೂಬಾಯ್ ಅವರನ್ನು ಭೇಟಿಯಾಗಿ ಮನವಿ ಅರ್ಪಿಸಿದರು.
    ಮುಖ್ಯ ಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಸ್ –ಕಾಂಗ್ರೆಸ್  ಮೈತ್ರಿ  ಸರಕಾರ ಶಾಸಕರುಗಳ ರಾಜೀನಾಮೆಯಿಂದಾಗಿ ಅಲ್ಪಮತಕ್ಕೆ ಕುಸಿದಿದೆ. ಶಾಸಕರು ನೀಡಿರುವ ರಾಜೀನಾಮೆಯನ್ನು ಸ್ಪೀಕರ್ ಕಾರಣ ಹೇಳಿ, ಅಂಗೀಕರಿಸಿಲ್ಲ. ಇನ್ನೂ  ರಾಜೀನಾಮೆ ನೀಡುವವರು ಇದ್ದಾರೆ. ಈ ಎಲ್ಲ ಬೆಳವಣಿಗೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತಗೊಂಡಿದೆ. ಕೂಡಲೇ ತಾವು ಧ್ಯಪ್ರವೇಶಿಸಬೇಕು. ಬಹುಮತ ಇರುವ ಪಕ್ಷಕ್ಕೆ ಸರಕಾರ ರಚನೆಗೆ ಅವಕಾಶ ಮಾಡಿಕೊಡಬೇಕು ಎಂದು ಬಿಜೆಪಿ ನಾಯಕರು ರಾಜ್ಯಪಾಲರಿಗೆ  ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News