ಉಡುಪಿ: ಜು.13,14ಕ್ಕೆ ಜಿಲ್ಲಾ ಮಟ್ಟದ ಹಲಸುಮೇಳ
Update: 2019-07-10 21:28 IST
ಉಡುಪಿ, ಜು.10: ಜಿಲ್ಲಾಡಳಿತ, ಜಿಲ್ಲಾ ತೋಟಗಾರಿಕೆ ಇಲಾಖೆ ಹಾಗೂ ಉಡುಪಿ ಜಿಲ್ಲಾ ಕೃಷಿಕ ಸಮಾಜದ ಸಹಯೋಗದಲ್ಲಿ ಜು.13 ಮತ್ತು 14ರಂದು 2019ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟದ ಹಲಸು ಮೇಳ ಹಾಗೂ ಸಸ್ಯ ಸಂತೆಗೆ ಚಾಲನೆ ದೊರೆಯಲಿದೆ.
ಈ ಕಾರ್ಯಕ್ರಮಗಳು ಉಡುಪಿ ಶಿವಳ್ಳಿ ಮಾದರಿ ತೋಟಗಾರಿಕಾ ಕ್ಷೇತ್ರದಲ್ಲಿರುವ ದೊಡ್ಡಣಗುಡ್ಡೆ ಪುಷ್ಪಹರಾಜು ಕೇಂದ್ರದ (ರೈತ ಸೇವಾ ಕೇಂದ್ರ) ಆವರಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜು.13ರ ಬೆಳಗ್ಗೆ 11 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಉದ್ಘಾಟಿಸಲಿದ್ದು, ಉಡುಪಿ ಶಾಸಕ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.