ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವುದಿಲ್ಲ: ಕುಮಾರಸ್ವಾಮಿ ಸ್ಪಷ್ಟನೆ

Update: 2019-07-11 05:54 GMT

ಬೆಂಗಳೂರು: ಮುಖ್ಯಮಂತ್ರಿ  ಹುದ್ದೆಗೆ ರಾಜೀನಾಮೆ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. 

ಅವರು ಕುಮಾರ ಕೃಪ ಅತಿಥಿ ಗೃಹದಲ್ಲಿ ಮೈತ್ರಿ ನಾಯಕರ ಸಭೆಯಲ್ಲಿ ಈ ಬಗ್ಗೆ ಹೇಳಿಕೆ ನೀಡಿದರು. ಯಡಿಯೂರಪ್ಪ ಈ ಹಿಂದೆ ಮುಖ್ಯಮಂತ್ರಿ ಆಗಿದ್ದ ವೇಳೆ ಏನೇನು ನಡೆದಿದೆ ಎಂಬುದನ್ನು ನೆನಪು ಮಾಡಿಕೊಳ್ಳಬೇಕು. 2009ರಲ್ಲಿ ಇದೇ ಪರಿಸ್ಥಿತಿ ಇದ್ದಾಗ ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರ ಎಂದು ಕುಮಾರಸ್ವಾಮಿ ಇದೇ ವೇಳೆ ಪ್ರತಿಕ್ರಿಯೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News