ಅತೃಪ್ತ ಶಾಸಕರ ರಾಜೀನಾಮೆಯನ್ನು 6 ಗಂಟೆಯೊಳಗೆ ಇತ್ಯರ್ಥಗೊಳಿಸಲು ಸಾಧ್ಯವಿಲ್ಲ: ಸ್ಪೀಕರ್ ರಮೇಶ್ ಕುಮಾರ್

Update: 2019-07-11 09:54 GMT

ಹೊಸದಿಲ್ಲಿ, ಜು.11: ಅತೃಪ್ತ ಶಾಸಕರು ನೀಡಿರುವ ರಾಜೀನಾಮೆಯನ್ನು ಗುರುವಾರ  ಸಂಜೆ 6 ಗಂಟೆಯ ಒಳಗಾಗಿ ಇತ್ಯರ್ಥಗೊಳಿಸಲು ಸಾಧ್ಯವಿಲ್ಲ ಎಂದು ಸ್ಪೀಕರ್ ರಮೇಶ್ ಕುಮಾರ್ ಸುಪ್ರೀಂ ಕೋರ್ಟ್ ಗೆ ತಿಳಿಸಿದ್ದಾರೆ.

ಈ ಬಗ್ಗೆ ಸ್ಪೀಕರ್ ರಮೇಶ್ ಕುಮಾರ್ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ತನ್ನ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸುವಂತೆ ಸ್ಪೀಕರ್ ರಮೇಶ್ ಕುಮಾರ್ ಮಾಡಿರುವ ಮನವಿಯನ್ನು ಸುಪ್ರಿಂ ಕೋರ್ಟ್ ಗೆ ತಿರಸ್ಕರಿಸಿದ್ದು, ರಮೇಶ್ ಕುಮಾರ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರಿಂ ಕೋರ್ಟ್ ಶುಕ್ರವಾರಕ್ಕೆ ಮುಂದೂಡಿದೆ

ಸ್ಪೀಕರ್ ಗೆ ಈ ರೀತಿ ತುರ್ತು ನಿರ್ದೇಶನ ನೀಡಲು ಸುಪ್ರಿಂ ಕೋರ್ಟ್ ಗೆ  ಸಾಧ್ಯವಿಲ್ಲ.  ಶಾಸಕರು ಸ್ವ- ಇಚ್ಛೆಯಿಂದ ರಾಜೀನಾಮೆ ನೀಡಿದ್ದಾರಾ .. ? ಇಲ್ಲವೊ  ?  ಎನ್ನುವ  ಬಗ್ಗೆ ಪರಿಶೀಲನೆ  ನಡೆಸಬೇಕಾಗಿರುವ ಹಿನ್ನೆಲೆಯಲ್ಲಿ ಶಾಸಕರ ರಾಜೀನಾಮೆಯನ್ನು ತುರ್ತಾಗಿ ನಡೆಸಲು ಸಾಧ್ಯವಿಲ್ಲ ಎಂದು ಸ್ಪೀಕರ್ ಸುಪ್ರೀಂ ಕೋರ್ಟ್ ಗೆ ತಿಳಿಸಿದ್ದಾರೆ.

READ THIS STORY IN ENGLISH

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News