ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ: ಇ-ಸ್ಟ್ಯಾಂಪ್ ಉದ್ಘಾಟನೆ

Update: 2019-07-11 11:11 GMT

ಪಡುಬಿದ್ರಿ: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಪ್ರಧಾನ ಕಚೇರಿಯಲ್ಲಿ ಇ-ಸ್ಟಾಂಪ್ (ಠಸೆ ಪೇಪರ್) ಸೇವೆಯನ್ನು ಉಡುಪಿ ತಾಲ್ಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರಿ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಕರ್ಜೆ ಉದ್ಘಾಟಿಸಿದರು.

ಜನರಿಗೆ ಅತ್ಯಗತ್ಯ ಇರುವ ಇ-ಸ್ಟಾಂಪ್ ಸೇವೆಯು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯಿಂದ ಸುಲಭ ರೀತಿಯಲ್ಲಿ ಸಿಗುವಂತಾಗಿದೆ. ಈ ಯೋಜನೆಯು ಯಶಸ್ವಿಯನ್ನು ಪಡೆಯಲಿ ಎಂದು ಅಶೋಕ್ ಕುಮಾರ್ ಶೆಟ್ಟಿ ಶುಭ ಹಾರೈಸಿದರು. 

ಪರ್ಯಾಯ ಪಲಿಮಾರು ಮಠದ ದಿವಾನರಾದ ಶಿಬರೂರು ವೇದವ್ಯಾಸ ತಂತ್ರಿ ಆಶಿರ್ವಚನ ನೀಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಅಶೋಕ್ ಕುಮಾರ್ ಶೆಟ್ಟಿ ಬೆಳ್ಳಂಪಳ್ಳಿ, ಕೊಡವೂರು ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ನಾರಾಯಣ ಬಲ್ಲಾಳ್, ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಸತೀಶ್ ಶೆಟ್ಟಿ, ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಕರ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಅಧ್ಯಕ್ಷ ವೈ. ಸುಧೀರ್ ಕುಮಾರ್ ವಹಿಸಿ ಸ್ವಾಗತಿಸಿ ಪ್ರಸ್ತಾವಿಸಿದರು. ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಆಡಳಿತ ಮಂಡಳಿ ಸದಸ್ಯರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಶಾಖಾ ವ್ಯವಸ್ಥಾಪಕರು, ಸಿಬ್ಬಂದಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಉಪಾಧ್ಯಕ್ಷ ಗುರುರಾಜ್ ಪೂಜಾರಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News