ಪಡುಬಿದ್ರೆ: 6500 ವಿದ್ಯಾರ್ಥಿಗಳಿಗೆ ಶಾಲಾ ಪರಿಕರ ವಿತರಣೆ

Update: 2019-07-11 15:20 GMT

ಪಡುಬಿದ್ರೆ, ಜು.11: ಅದಾನಿ ಯುಪಿಸಿಎಲ್ ಕಂಪೆನಿ ಅಂಗ ಸಂಸ್ಥೆಯಾದ ಅದಾನಿ ಫೌಂಡೇಷನ್ ವತಿಯಿಂದ ಸ್ಥಾವರದ ಸುತ್ತಮುತ್ತಲಿನ ಸುಮಾರು 80 ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಕಲಿಯುತ್ತಿರುವ 6,500 ವಿದ್ಯಾರ್ಥಿಗಳಿಗೆ ಒಟ್ಟು ರೂ. 61.75 ಲಕ್ಷ ರೂ. ಮೌಲ್ಯದ ಶಿಕ್ಷಣ ಪರಿಕರ ಗಳನ್ನು ವಿತರಿಸಲಾಯಿತು.

ಅದಾನಿ ಸಂಸ್ಥೆಯ ಅಧ್ಯಕ್ಷ ಕಿಶೋರ್ ಆಳ್ವ ಶಾಲೆಗಳಿಗೆ ತೆರಳಿ ಸಾಂಕೇತಿಕವಾಗಿ ನೋಟ್ ಪುಸ್ತಕಗಳು, ಜಾಮಿಟ್ರಿ ಬಾಕ್ಸ್, ಬ್ಯಾಗ್, ಕೊಡೆಗಳನ್ನು ಒಳಗೊಂಡ ಶಾಲಾ ಪರಿಕರಗಳನ್ನು ವಿತರಿಸಿದರು.

ಸತತವಾಗಿ 5 ವರ್ಷಗಳಿಂದ ಬೃಹತ್ ಪ್ರಮಾಣದಲ್ಲಿ ಸ್ಥಾವರದ ಆಸುಪಾಸಿನ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಪರಿಕರಗಳನ್ನು ಒದಗಿಸುತ್ತಿದ್ದು, ಪ್ರತಿ ಶೈಕ್ಷಣಿಕ ಸಾಲಿನಲ್ಲಿ ಸುಮಾರು 70 ಲಕ್ಷ ರೂ.ನಷ್ಟು ಅನುದಾನವನ್ನು ಈ ಕಾರ್ಯಕ್ರಮಕ್ಕೆ ಮೀಸಲಿಡಲಾಗಿದೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News