ಉಡುಪಿ: ಜು.15ರಂದು ಉದ್ಯೋಗ ಮೇಳ

Update: 2019-07-11 16:58 GMT

ಉಡುಪಿ, ಜು.11: ಕೌಶಲ್ಯಾಭಿವೃಧ್ಧಿ, ಉದ್ಯಮಶೀಲತೆ ಮತ್ತು ಜೀವನೋ ಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಕೌಶಲ್ಯ ದಿನದ ಅಂಗವಾಗಿ ಉದ್ಯೋಗ ಮೇಳವೊಂದು ಜು.15ರ ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದೆ.

ಈ ಉದ್ಯೋಗಮೇಳದ ಅಂಗವಾಗಿ ವೃತ್ತಿ ಮಾರ್ಗದರ್ಶನ ತರಬೇತಿ ಮತ್ತು ಸಂದರ್ಶನ ಪೂರ್ವ ತಯಾರಿಯ ಬಗ್ಗೆ ಕಾರ್ಯಾಗಾರವು ಜು.12 ರಂದು ಬೆಳಗ್ಗೆ 10 ಗಂಟೆಯಿಂದ ಅಪರಾಹ್ನ 1:30ರವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದೆ.

ಜು.15ರಂದು ನಡೆಯುವ ಉದ್ಯೋಗ ಮೇಳದಲ್ಲಿ ವಿವಿಧ ಕಂಪೆನಿ/ಸಂಸ್ಥೆಗಳು ಭಾಗವಹಿಸಿ ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಉದ್ಯೋಗಾಕಾಂಕ್ಷಿಗಳ ನೇಮಕ ಮಾಡಿಕೊಳ್ಳ ಲಿರುವುದರಿಂದ ಖಾಸಗಿ ವಲಯದಲ್ಲಿ ಉದ್ಯೋಗಕ್ಕೆ ಆಸಕ್ತಿ ಇರುವ ಎಸೆಸೆಲ್ಸಿ/ಪಿಯುಸಿ/ಯಾವುದೇ ಪದವಿ/ಡಿಪ್ಲೋಮ ಹಾಗೂ ಕ್ಷೇತ್ರಕ್ಕೆ ಸಂಬಂಧಿಸಿದ ವಿದ್ಯಾರ್ಹತೆಯ ಅಭ್ಯರ್ಥಿಗಳು ಅಂಕಪಟ್ಟಿ/ರೆಸ್ಯೂಮ್(ಬಯೋಡೇಟಾ) ಇತ್ಯಾದಿ ದಾಖಲೆಗಳೊಂದಿಗೆ ಜು.15ರಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ರಜತಾದ್ರಿ ಮಣಿಪಾಲ ಇಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಹಾಜರಾಗುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News