ಜು.14ರ ವರೆಗೆ ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿ

Update: 2019-07-11 17:36 GMT

ಬೆಂಗಳೂರು, ಜು.11: ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವಿದ್ಯಮಾನಗಳ ಸಂಬಂಧ ಇಂದಿನಿಂದ ಜು.14ರ ವರೆಗೆ ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ವಿಧಾನಸೌಧದ ಬಳಿ ಮತ್ತು ಹೊರಭಾಗಗಳಲ್ಲಿ ಇತರೆ ರಾಜಕೀಯ ಪಕ್ಷಗಳ ಮುಖಂಡರು, ಅವರ ಅನುಯಾಯಿಗಳು ಮತ್ತು ಕಾರ್ಯಕರ್ತರುಗಳಿಂದ ಪ್ರತಿಭಟನೆ, ಧರಣಿ, ಸತ್ಯಾಗ್ರಹಗಳಂತಹ ಕಾರ್ಯಕ್ರಮಗಳು ಮತ್ತು ಕಾರ್ಯಕರ್ತರ ಮಧ್ಯೆ ಘರ್ಷಣೆ ಉಂಟಾಗುವ ಸಾಧ್ಯತೆ ಇದೆ.

ಹಾಗಾಗಿ, ವಿಧಾನಸೌಧದ ಕಚೇರಿಗಳ ದೈನಂದಿನ ಕಾರ್ಯಕಲಾಪಗಳಿಗೆ ಅಡಚಣೆ ಉಂಟಾಗುವುದಲ್ಲದೆ, ಸಾರ್ವಜನಿಕ ನೆಮ್ಮದಿಗೆ ಭಂಗ ಹಾಗೂ ಸುಗಮ ಸಂಚಾರಕ್ಕೆ ತೊಂದರೆ ಆಗಬಹುದಾದ ಸಾಧ್ಯತೆ ಇರುವುದರಿಂದ ವಿಧಾನಸೌಧದ ಕಟ್ಟಡದ ಸುತ್ತಲೂ 2ಕಿಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News