ಪ್ರಚೋದನಕಾರಿ ಭಾಷಣ ಮಾಡಿದ ಆರೋಪ: ಮುತಾಲಿಕ್ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

Update: 2019-07-12 14:53 GMT

ಬೆಂಗಳೂರು, ಜು.12: ಪ್ರಚೋದನಕಾರಿ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ವಜಾಗೊಳಿಸಿದೆ.

ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಪ್ರಮೋದ್ ಮುತಾಲಿಕ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ಕುಮಾರ್ ಅವರಿದ್ದ ಏಕದಸ್ಯ ನ್ಯಾಯಪೀಠದಲ್ಲಿ ನಡೆಯಿತು.

ಅರ್ಜಿ ಮಾನ್ಯ ಮಾಡಿ ಪ್ರಕರಣ ರದ್ದುಗೊಳಿಸಿ ಆದೇಶಿಸಿತು. ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಪ್ರಮೋದ್ ಮುತಾಲಿಕ್ ವಿರುದ್ಧ ದೂರು ದಾಖಲಿಸಿದ್ದ ಪೊಲೀಸರು, ವಿಚಾರಣೆ ನಡೆಸಿ ಶಿಕಾರಿಪುರ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.

ತಮ್ಮ ವಿರುದ್ಧದ ದೂರು ಹಾಗೂ ಅಧೀನ ನ್ಯಾಯಾಲಯದ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ಮುತಾಲಿಕ್ ಅರ್ಜಿ ಸಲ್ಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News