ಮರಾಠ ಮೀಸಲಾತಿ: ಪ್ರತಿಕ್ರಿಯೆ ನೀಡುವಂತೆ ಸುಪ್ರೀಂನಿಂದ ಮಹಾರಾಷ್ಟ್ರ ಸರಕಾರಕ್ಕೆ ನಿರ್ದೇಶ

Update: 2019-07-12 16:38 GMT

ಮುಂಬೈ, ಜು. 12: ಶಿಕ್ಷಣ ಹಾಗೂ ಸರಕಾರಿ ಉದ್ಯೋಗದಲ್ಲಿ ಮರಾಠಾ ಸಮುದಾಯಕ್ಕೆ ಮೀಸಲಾತಿ ನೀಡಿರುವುದನ್ನು ಎತ್ತಿ ಹಿಡಿದ ಬಾಂಬೆ ಉಚ್ಚ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಮನವಿಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಮಹಾರಾಷ್ಟ್ರ ಸರಕಾರ ನಿರ್ದೇಶಿಸಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಪೀಠ ಮರಾಠಾ ಮೀಸಲಾತಿ ಕಾನೂನಿನ ಸಾಂವಿಧಾನಿಕ ಸಿಂಧುತ್ವ ಎತ್ತಿ ಹಿಡಿದಿರುವ ಬಾಂಬೆ ಉಚ್ಚ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆ ನೀಡಿಲ್ಲ. ಆದರೆ, ಜಾರಿಯಾಗದೆ ಈ ನಿರ್ಧಾರವನ್ನು ಅನುಷ್ಠಾನಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ಮಹಾರಾಷ್ಟ್ರದಲ್ಲಿ ಮರಾಠ ಸಮುದಾಯಕ್ಕೆ ಶಿಕ್ಷಣ ಹಾಗೂ ಸರಕಾರಿ ಉದ್ಯೋಗದಲ್ಲಿ ಮೀಸಲಾತಿಯ ಸಾಂವಿಧಾನಿಕ ಮಾನ್ಯತೆ ಎತ್ತಿ ಹಿಡಿದ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಜೆ. ಲಕ್ಷ್ಮಣ್ ರಾವ್ ಪಾಟೀಲ್ ಸಹಿತ ಇಬ್ಬರು ಸಲ್ಲಿಸಿದ ಮನವಿಯ ವಿಚಾರಣೆಯನ್ನು ಪೀಠ ನಡೆಸಿತು. ಮಹಾರಾಷ್ಟ್ರದಲ್ಲಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮರಾಠಾ ಸಮುದಾಯಕ್ಕೆ ಮೀಸಲಾತಿ ನೀಡುವ ಪ್ರಕ್ರಿಯೆಯನ್ನು ಮುಂದುವರಿಸುವಂತೆ ಬಾಂಬೆ ಉಚ್ಚ ನ್ಯಾಯಾಲಯ ಜೂನ್ 27ರಂದು ನೀಡಿದ ತೀರ್ಪಿನ ಸಿಂಧುತ್ವ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಸಲಾಗಿತ್ತು. ಮಹಾರಾಷ್ಟ್ರ ಮೀಸಲಾತಿ ಪ್ರಕರಣದಲ್ಲಿ ದಾಖಲಿಸಲಾದ ಮನವಿಯ ಕುರಿತು ಸುಪ್ರೀಂ ಕೋರ್ಟ್ ಮಹಾರಾಷ್ಟ್ರ ಸರಕಾರಕ್ಕೆ ನೋಟಿಸು ಜಾರಿ ಮಾಡಿದೆ. ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವುದನ್ನು ಬಾಂಬೈ ಉಚ್ಚ ನ್ಯಾಯಾಲಯ ಜೂನ್ 27ರಂದು ನೀಡಿದ ತೀರ್ಪಿನಲ್ಲಿ ಎತ್ತಿ ಹಿಡಿದಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News