​ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ

Update: 2019-07-12 16:42 GMT

ಉಡುಪಿ, ಜು.12:2019-20ನೇ ಸಾಲಿನ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕಾರ್ಯಕ್ರಮದಡಿ ಮತೀಯ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪಿಯುಸಿ ನಂತರ ಸಿಇಟಿ ಹಾಗೂ ನೀಟ್‌ಗಳಿಗೆ ತರಬೇತಿ ನೀಡುವ ಕುರಿತು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಅ್ಯರ್ಥಿಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ಪ್ರವರ್ಗ-1ಕ್ಕೆ 4.50 ಲಕ್ಷ ರೂ.ಹಾಗೂ ಇತರೆ ಪ್ರವರ್ಗಕ್ಕೆ 3.50 ಲಕ್ಷ ರೂ.ಒಳಗಿರಬೇಕು. ಅರ್ಜಿ ಜೊತೆ ಸಲ್ಲಿಸಬೇಕಾದ ದಾಖಲೆಗಳು: ದೃಢೀಕೃತ ಎಸೆಸೆಲ್ಸಿ ಅಂಕಪಟ್ಟಿಯ ನಕಲು ಪ್ರತಿ, ದೃಢೀಕೃತ ಜಾತಿ ಮತ್ತು ಆದಾಯ ಪ್ರಮಾಣಪತ್ರ, ಸ್ವಯಂ ದೃಢೀಕೃತ ಇತ್ತೀಚಿನ ಎರಡು ಭಾವಚಿತ್ರ, ಪೂರ್ಣ ಗ್ರಾಮ/ತಾಲೂಕು/ಜಿಲ್ಲಾ ವಿಳಾಸವನ್ನು (ಪಿನ್ ಕೋಡ್ ಸಹಿತ) ಲಗತ್ತಿಸಬೇಕು.

ಅರ್ಜಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಉಡುಪಿ ಜಿಲ್ಲೆ ಇಲ್ಲಿಂದ ಪಡೆದು, ಭರ್ತಿ ಮಾಡಿ ಕಾಲೇಜು ಪ್ರಾಂಶುಪಾಲರಿಂದ ದೃಢೀಕರಿಸಿ,ಎಲ್ಲಾ ದಾಖಲಾತಿಗಳೊಂದಿಗೆ ಜಿಲ್ಲಾ ಕಚೇರಿಗೆ ಅಥವಾ ಆಯಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಕ್ಕೆ ಜು.18ರ ಒಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ :0820-2574881, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ರಜತಾದ್ರಿ, ಮಣಿಪಾಲ (ದೂ.ಸಂಖ್ಯೆ: 0820-2574596) ಹಾಗೂ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಗಳಾದ ಕಾರ್ಕಳ, ಕುಂದಾಪುರ ಕಚೇರಿಯನ್ನು ಸಂರ್ಪಕಿಸುವಂತೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News