ಅಕ್ರಮ ದನದ ಮಾಂಸ ಮಾರಾಟ: ಸೊತ್ತು ಸಹಿತ ಆರೋಪಿ ಸೆರೆ

Update: 2019-07-12 16:56 GMT

ಬಂಟ್ವಾಳ : ಅಕ್ರಮವಾಗಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ದ್ವಿಚಕ್ರ ವಾಹನ ಸಹಿತ ಓರ್ವನನ್ನು ಬಂಧಿಸಿದ ಘಟನೆ ಬಂಟ್ವಾಳ ನಗರ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ.

ನಂದಾವರದ ನಿವಾಸಿ ಮುಹಮ್ಮದ್ ಸಮೀನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಈತ ಶುಕ್ರವಾರ ಮಂಚಿ ಸಮೀಪದ ಬೊಳ್ಳಾಯಿ ಎಂಬಲ್ಲಿ ದನದ ಮಾಂಸವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಎಸ್ಸೈ ಚಂದ್ರಶೇಖರ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ, ದ್ವಿಚಕ್ರ ವಾಹನದಲ್ಲಿದ್ದ ೧೨ಕೆ.ಜಿ.ದನದ ಮಾಂಸ ಸಹಿತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News