ಅತೃಪ್ತ ಶಾಸಕರು ಬಿಜೆಪಿಗೆ ಬೇಡ: ಅಮಿತ್ ಶಾರಿಗೆ ಕಾರ್ಯಕರ್ತರ ಆಗ್ರಹ

Update: 2019-07-13 12:57 GMT

ಬೆಂಗಳೂರು, ಜು.13: ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಬಾರದು ಎಂದು ಸಾವಿರಾರು ಬಿಜೆಪಿ ಕಾರ್ಯಕರ್ತರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಆಗ್ರಹಿಸಿದ್ದಾರೆ.

ಕಾಂಗ್ರೆಸ್‌ನ ಅತೃಪ್ತ ಶಾಸಕರಾದ ಮುನಿರತ್ನ, ಭೈರತಿ ಬಸವರಾಜು, ಎಸ್.ಟಿ.ಸೋಮಶೇಖರ್ ಮತ್ತು ಜೆಡಿಎಸ್ ಶಾಸಕ ಗೋಪಾಲಯ್ಯ ಅವರಂತಹ ವಂಚಕರನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಮಾಡಬಾರದು. ಬಿಜೆಪಿಯ ಸಾವಿರಾರು ಕಾರ್ಯಕರ್ತರು ಅಮಿತ್ ಶಾ ಅವರಿಗೆ ಇ-ಮೇಲ್ ಮತ್ತು ಟ್ವೀಟರ್‌ಗಳ ಮೂಲಕ ಕಾಂಗ್ರೆಸ್ ಮತ್ತು ಜೆಡಿಎಸ್‌ನ ಈ ಅತೃಪ್ತ ಶಾಸಕರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುವುದು ಸರಿಯಲ್ಲ ಎಂದು ಮನವಿ ಮಾಡಿದ್ದಾರೆ.

ಭ್ರಷ್ಟಾಚಾರ ಮುಕ್ತ ದೇಶವನ್ನಾಗಿಸಲು ಕನಸು ಹೊತ್ತಿರುವ ಬಿಜೆಪಿ ರಾಜ್ಯದಲ್ಲಿ ಅಧಿಕಾರ ಹಿಡಿಯಬೇಕೆಂಬ ಸ್ವಾರ್ಥಕ್ಕಾಗಿ ಈ ಶಾಸಕರುಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದು ಬಿಜೆಪಿ ತತ್ವ, ಸಿದ್ಧಾಂತಕ್ಕೆ ವಿರುದ್ಧವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News