ಶಿಕ್ಷಣದಲ್ಲಿ ಅಂಕ ಪಡೆಯುವುದು ಮುಖ್ಯವಲ್ಲ: ವಿವಿ ಕುಲಪತಿ ಪ್ರೊ. ಪಿ.ಎಸ್.ಯಡಪಡಿತ್ತಾಯ

Update: 2019-07-13 17:11 GMT

ಕೊಣಾಜೆ: ಶಿಕ್ಷಣದಲ್ಲಿ ಅಂಕ ಪಡೆಯುವುದು ಮುಖ್ಯವಲ್ಲ. ಪದವಿಯೊಂದಿಗೆ ನಿರಂತರ ಜ್ಞಾನಾಭಿವೃದ್ಧಿ, ಜೀವನ ಶಿಕ್ಷಣವನ್ನು ಅಳವಡಿಕೊಳ್ಳಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಸ್.ಯಡಪಡಿತ್ತಾಯ ಅಭಿಪ್ರಾಯಪಟ್ಟರು.

ಅವರು ದೇರಳಕಟ್ಟೆಯ ಕಣಚೂರು ಇನ್‍ಸ್ಟಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಇದರ ಸಭಾಂಗಣದಲ್ಲಿ ಕಣಚೂರು ಎಜ್ಯುಕೇಶನ್ ಆಫ್ ಜನರಲ್ ಎಜ್ಯಕೇಶನ್ ಇದರ ಸಂಸ್ಥಾಪಕರ ದಿನಾಚರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಮುಖ್ಯವಾಗಿ ವೈದ್ಯವಿದ್ಯಾರ್ಥಿಗಳು, ಮಾನವೀಯತೆಯೊಂದಿಗೆ ನೈತಿಕ ಮೌಲ್ಯಕ್ಕೆ ಹೆಚ್ಚಿನ ಗಮನ ಕೊಡಬೇಕು. ಈ ಶಿಕ್ಷಣ ಸಂಸ್ಥೆ ನೈತಿಕ ಮೌಲ್ಯದ ಭದ್ರಬುನಾದಿಯಡಿ ಕಣಚೂರು ಮೋನು ಅವರು ಸ್ಥಾಪಿಸಿದ್ದು ಈ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆ ಇಂದು ಯಶಸ್ವಿಯಾಗಿ ಮುನ್ನಡೆಯಲು ಸಾಧ್ಯವಾಗಿದೆ. ಇಂತಹ ಮೌಲ್ಯಗಳನ್ನು ಈ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪಡೆಯುವ ವಿದ್ಯಾರ್ತಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಕಣಚೂರು ಅಕಾಡೆಮಿ ಆಪ್ ಜನರಲ್ ಎಜ್ಯುಕೇಶನ್‍ನ ಶೈಕ್ಷಣಿಕ ಸಲಹೆಗಾರ ಹಾಗೂ ಕ್ಯಾಲಿಕಟ್ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ. ಎಂ. ಅಬ್ದುಲ್ ರಹಿಮಾನ್ ಮಾತನಾಡಿ ಕಳೆದ ಹಲವು ವರ್ಷಗಳಿಂದ ಗುಣಮಟ್ಟದ ಶಿಕ್ಷಣದೊಂದಿಗೆ ಕಣಚೂರು ಶಿಕ್ಷಣ ಸಂಸ್ಥೆ ಹೆಸರುವಾಸಿಯಾಗಿದ್ದು, ಇದಕ್ಕೆ ಮುಖ್ಯ ಕಾರಣ ಸ್ಥಾಪಕರ ದೂರದೃಷ್ಟಿತ್ವ ಕಾರಣ ಎಂದರು.

ಕಣಚೂರು ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯು.ಕಣಚೂರು ಮೋನು ಅಧ್ಯಕ್ಷತೆ ವಹಿಸಿ ಮಾತನಾಡಿ ಈ ಶಿಕ್ಷಣ ಸಂಸ್ಥೆಯಿಂದ ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ಉದ್ಧೇಶದಿಂದ ಸ್ತಾಪಿಸಿದ್ದು, ಇಲ್ಲಿಂದ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉನ್ನತ ಸ್ಥಾನವನ್ನು ಪಡೆದರೆ ಮಾತ್ರ ನಮ್ಮ ಪ್ರಯತ್ನ ಸಾರ್ಥಕ ಎಂದರು.

ಕಾರ್ಯಕ್ರಮದಲ್ಲಿ ಕಣಚೂರು ಆಸ್ಪತ್ರೆಯ ಮೆಡಿಕಲ್ ಸುಪರಿಟೆಂಡೆಟ್ ಡಾ. ದೇವಿಪ್ರಸಾದ್ ಶೆಟ್ಟಿ, ಕಣಚೂರು ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‍ನ ವೈಸ್ ಡೀನ್ ಡಾ. ಶ್ರೀಷಾ ಖಂಡಿಗೆ, ಮೆಡಿಕಲ್ ಕಾಲೇಜಿನ ಮುಖ್ಯ ಆಡಳಿತಾ„ಕಾರಿ ಡಾ. ರೋಹನ್ ಮೋನಿಸ್, ಕಣಚೂರು ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲ ಡಾ. ಮೊಹಮ್ಮದ್ ಸುಹೈಲ್, ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ರೆನಿಲ್ಡಾ ಶಾಂತಿ ಲೋಬೋ, ಪ್ಯಾರಾಮೆಡಿಕಲ್ ಕಾಲೇಜಿನ ಪ್ರಾಂಶುಪಾಲೆ ಡಾ. ವಿವಿಯನ್ ಡಿ.ಸೋಜ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಹೇಮಲತಾ, ಪಬ್ಲಿಕ್ ಸ್ಕೂಲ್ ಮುಖ್ಯ ಶಿಕ್ಷಕಿ ಆನಂದಿ ಕೆ., ಫ್ರೀ ಸ್ಕೂಲ್‍ನ ಮುಖ್ಯ ಶಿಕ್ಷಕಿ ಲಿನೆಟ್ ಡಿ.ಸೋಜ ಉಪಸ್ಥಿತರಿದ್ದರು.


 ಈ ಸಂದರ್ಭದಲ್ಲಿ ಕಣಚೂರು ಅಕಾಡೆಮಿ ಆಪ್ ಜನರಲ್ ಎಜ್ಯುಕೇಶನ್‍ನ ಸ್ಥಾಪಕ ಯು.ಕೆ.ಮೋನು ಕಣಚೂರು ಮತ್ತು ಟ್ರಸ್ಟಿ ಝೊಹರಾ ಮೋನು ಅವರನ್ನು ಸನ್ಮಾನಿಸಲಾಯಿತು. ವಿವಿ ಕುಲಪತಿ ಪ್ರೊ. ಪಿ.ಎಸ್. ಯಡಪಡಿತ್ತಾಯ ಅವರನ್ನು ಕಣಚೂರು ಸಮೂಹ ಶಿಕ್ಷಣ ಸಂಸ್ಥೆಗಳಿಂದ ಸನ್ಮಾನಿಸಲಾಯಿತು. 

  ಕಣಚೂರು ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‍ನ ನಿರ್ದೇಶಕ ಅಬ್ದುಲ್ ರಹೆಮಾನ್ ಕಣಚೂರು ಸ್ವಾಗತಿಸಿದರು. ಕಣಚೂರು ಇನ್‍ಸ್ಟಿಟ್ಯೂಟ್ ಆಫ್ ಮ್ಯನೇಜ್‍ಮೆಂಟ್ ಎಂಡ್ ಸೈನ್ಸ್ ನ ಪ್ರಾಂಶುಪಾಲ ಇಕ್ಬಾಲ್ ಆಹ್ಮದ್ ಯು.ಟಿ. ವ್ಯಕ್ತಿಪರಿಚಯ ನೀಡಿದರು. ಡಾ| ಆನೆಟ್ ಒಲಿಂಡಾ ಡಿ.ಸೋಜ ಕಾರ್ಯಕ್ರಮ ನಿರ್ವಹಿಸಿದರು. ಕಣಚೂರು ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‍ನ ಡೀನ್ ಪೆÇ್ರ| ಡಾ. ಎಚ್ ಎಸ್. ವಿರೂಪಾಕ್ಷ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News