×
Ad

ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತ್ಯು

Update: 2019-07-13 23:10 IST

ಮಂಗಳೂರು, ಜು.13: ನಗರದ ಎಕ್ಕೂರು ಬಳಿ ಸ್ಕೂಟರ್ ಸ್ಕಿಡ್ ಆದ ಪರಿಣಾಮ ಡಿವೈಡರ್, ಕಾರಿಗೆ ಢಿಕ್ಕಿಯಾಗಿ ಗಾಯಗೊಂಡ ಹರೀಶ್ (33) ಎಂಬವರು ಚಿಕಿತ್ಸೆ ಫಲಿಸದೆ ಶನಿವಾರ ಮೃತಪಟ್ಟಿದ್ದಾರೆ.

ಶುಕ್ರವಾರ ಎಕ್ಕೂರು ಬಳಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ನಿಯಂತ್ರಣ ತಪ್ಪಿ ಡಿವೈಡರ್ ಹಾಗೂ ಕಾರಿಗೆ ಢಿಕ್ಕಿಯಾಗಿದೆ. ಈ ಸಂದರ್ಭ ಗಾಯಗೊಂಡ ಹರೀಶ್ ಅವರು ಪ್ರಥಮ ಚಿಕಿತ್ಸೆ ಪಡೆದು ಮನೆಗೆ ಹೋಗಿದ್ದರು. ಮನೆಗೆ ಹೋದ ಬಳಿಕ ಮತ್ತೆ ಅಸ್ವಸ್ಥಕ್ಕೀಡಾಗಿ ಆಸ್ಪತ್ರೆಗೆ ಬರುತ್ತಿದ್ದಾಗ ಕೆಳಕ್ಕೆ ಬಿದ್ದಿದ್ದು ಕೂಡಲೇ ಅವರನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ಸೇರಿಸಲಾಯಿತು. ಆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿ ತಾದರೂ ಚಿಕಿತ್ಸೆ ಫಲಿಸದೆ ಶನಿವಾರ ಮೃತಪಟ್ಟಿದ್ದಾರೆ.

ಮೃತರಿಗೆ ಎರಡು ವರ್ಷದ ಹಿಂದೆ ಮದುವೆಯಾಗಿತ್ತು. ಕಂಕನಾಡಿ ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News