ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

Update: 2019-07-13 18:49 GMT

ಬೆಂಗಳೂರು, ಜು.13: ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಪರಿಷ್ಕೃತ ವೇಳಾಪಟ್ಟಿಯನ್ನು ಇಲಾಖೆ ವೆಬ್‌ಸೈಟ್ www.schooleducation.kar.nic.in ನಲ್ಲಿ ಪ್ರಕಟಿಸಲಾಗಿದೆ.

ತಂತ್ರಾಂಶದಲ್ಲಿನ ದೋಷ ಮತ್ತು ಕೆಲವು ಶಿಕ್ಷಕರು ನಕಲಿ ದಾಖಲೆ ಸೃಷ್ಟಿಸಿ ವರ್ಗಾವಣೆಗೆ ಯತ್ನಿಸಿದ್ದ ಕಾರಣ ಪರಿಷ್ಕೃತ ವೇಳಾಪಟ್ಟಿ ಸಿದ್ಧಪಡಿಸಲಾಗಿದ್ದು, ಶುಕ್ರವಾರದಿಂದಲೇ ಕಡ್ಡಾಯ ವರ್ಗಾವಣೆಗೆ ಕೌನ್ಸೆಲಿಂಗ್ ಆರಂಭವಾಗಿದೆ. ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಜೂನ್ 12ರಂದು ಆರಂಭವಾಗಿತ್ತು. ಆದರೆ ಟಿಡಿಎಸ್ ತಂತ್ರಾಂಶ ಸಮಸ್ಯೆಯಿಂದಾಗಿ ವರ್ಗಾವಣೆ ಪ್ರಕ್ರಿಯೆ ವಿಳಂಬವಾಗಿತ್ತು. ಈಗಾಗಲೇ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಪೂರ್ಣಗೊಂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News