ಕುಲಪತಿಗಳ ನೇಮಕಾತಿ ಪ್ರಕ್ರಿಯೆ;ಶೋಧನಾ ಸಮಿತಿ ರಚನೆ

Update: 2019-07-13 18:52 GMT

ಬೆಂಗಳೂರು, ಜು.13: ರಾಜ್ಯದ ಗುಲಬರ್ಗಾ ವಿಶ್ವವಿದ್ಯಾಲಯ ಮತ್ತು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯಗಳಿಗೆ ಹೊಸ ಕುಲಪತಿ ನೇಮಕಾತಿ ಪ್ರಕ್ರಿಯೆ ಸಂಬಂಧ ಎರಡು ಶೋಧನಾ ಸಮಿತಿಗಳನ್ನು ರಚಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಎರಡೂ ಶೋಧನಾ ಸಮಿತಿಗಳಲ್ಲಿ ತಲಾ ನಾಲ್ವರು ಸದಸ್ಯರಿದ್ದು, ಈ ಸಮಿತಿಯು ಎರಡೂ ವಿಶ್ವವಿದ್ಯಾಲಯಗಳಿಗೆ ತಲಾ ಮೂವರನ್ನು ಕುಲಪತಿಗಾಗಿ ಶಿಫಾರಸು ಮಾಡಲಿದೆ ಎಂದು ತಿಳಿದುಬಂದಿದೆ.

ಕರ್ನಾಟಕ ವಿಶ್ವವಿದ್ಯಾಲಯ ಕುಲಪತಿ ನೇಮಕಾತಿ ಸಮಿತಿಯಲ್ಲಿ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತಕುಮಾರ್ (ಅಧ್ಯಕ್ಷ), ಕರ್ನಾಟಕ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಎಂ.ಮಹಾದೇವಪ್ಪ(ರಾಜ್ಯಪಾಲರ ನಾಮನಿರ್ದೇಶಿತ ಸದಸ್ಯ), ಯುಜಿಸಿ ಮಾಜಿ ಸದಸ್ಯ ಪ್ರೊ.ವಿ.ಎಸ್.ಚೌಹಾಣ್ (ಯುಜಿಸಿ ನಾಮನಿರ್ದೇಶಿತ ಸದಸ್ಯ), ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಜೋಗನ್ ಶಂಕರ್(ಸಿಂಡಿಕೇಟ್ ಸದಸ್ಯ) ಇದ್ದಾರೆ.

ಅದೇ ರೀತಿ, ಹೊಸದಿಲ್ಲಿಯ ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ ಸಿಬ್ಬಂದಿ ತರಬೇತಿ ಮತ್ತು ಸಂಶೋಧನಾ ಸಂಸ್ಥೆಯ ಮಾಜಿ ನಿರ್ದೇಶಕ ಪ್ರೊ.ಸಂತೋಷ ಪಾಂಡಾ(ಅಧ್ಯಕ್ಷ).

ಕರ್ನಾಟಕ ವಿಶ್ವವಿದ್ಯಾಲಯ ಜೈವಿಕ ತಂತ್ರಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ.ವೇದಮೂರ್ತಿ ಎ.ಬಿ.(ರಾಜ್ಯಪಾಲರ ನಾಮನಿರ್ದೇಶಿತ ಸದಸ್ಯ), ಹರ್ಯಾಣದ ಸೋನಪೇಟ್ ಭಗತ್ ಫೂಲ್ಸಿಂಗ್ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸುಷ್ಮಾ ಯಾದವ್(ಯುಜಿಸಿ ನಾಮನಿರ್ದೇಶಿತ ಸದಸ್ಯೆ), ಶಿವಮೊಗ್ಗ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ವೆಂಕಟರಾಮಯ್ಯ(ಸಿಂಡಿಕೇಟ್ ಸದಸ್ಯ) ಅವರನ್ನೊಳಗೊಂಡ ಸಮಿತಿಯು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ನೇಮಕಾತಿಗೆ ನಿಯೋಜನೆಗೊಂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News