ಹಿಮಾಚಲ ಪ್ರದೇಶದಲ್ಲಿ ಕಟ್ಟಡ ಕುಸಿತ: ಇಬ್ಬರು ಮೃತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Update: 2019-07-14 18:27 IST
ಸೋಲಾನ್(ಹಿಮಾಚಲಪ್ರದೇಶ), ಜು.14: 3 ಮಹಡಿಗಳ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯಲ್ಲಿ ನಡೆದಿದೆ. ಗಾಯಗೊಂಡವರಲ್ಲಿ ಹಲವು ಯೋಧರಿದ್ದಾರೆ.
20ಕ್ಕೂ ಹೆಚ್ಚು ಮಂದಿ ಇನ್ನೂ ಅವಶೇಷಗಳಡಿ ಸಿಲುಕಿದ್ದಾರೆ. ಘಟನೆಯು ರವಿವಾರ ಸಂಜೆ 4 ಗಂಟೆ ಸುಮಾರಿಗೆ ಸಂಭವಿಸಿದ್ದು ಮೂರು ಮಾಳಿಗೆಯ ಕಟ್ಟಡದ ಒಂದು ಹಾಲ್‌ನಲ್ಲಿ ಭಾರತೀಯ ಸೇನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸೈನಿಕರು ಭಾಗವಹಿಸಿದ್ದರು. ರಕ್ಷಣೆ ಹಾಗೂ ಶೋಧ ಕಾರ್ಯಾಚರಣೆ ತೀವ್ರಗೊಳಿಸಲಾಗಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಸ್ಥಳಕ್ಕೆ ಧಾವಿಸಿದೆ. ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದೆ.