ವಿಶ್ವಕಪ್ ನಲ್ಲಿ ಹೊಸ ದಾಖಲೆ ಬರೆದ ವಿಲಿಯಮ್ಸನ್

Update: 2019-07-14 13:37 GMT

ಲಂಡನ್, ಜು.14: ನ್ಯೂಝಿಲ್ಯಾಂಡ್‌ನ ಕೇನ್ ವಿಲಿಯಮ್ಸನ್ ವಿಶ್ವಕಪ್‌ನಲ್ಲಿ ಗರಿಷ್ಠ ರನ್ ಗಳಿಸಿದ ನಾಯಕನೆಂಬ ಕೀರ್ತಿಗೆ ಭಾಜನರಾದರು. ಈ ಮೂಲಕ ಶ್ರೀಲಂಕಾದ ಮಹೇಲ ಜಯವರ್ಧನೆ ದಾಖಲೆಯನ್ನು ಮುರಿದರು.

ಇಂಗ್ಲೆಂಡ್ ವಿರುದ್ಧ ರವಿವಾರ ನಡೆದ ಫೈನಲ್ ಪಂದ್ಯದಲ್ಲಿ 30 ರನ್ ಗಳಿಸಿ ಔಟಾಗಿರುವ ವಿಲಿಯಮ್ಸನ್ ಈ ಸಾಧನೆ ಮಾಡಿದರು.

 ವಿಲಿಯಮ್ಸನ್ ಟೂರ್ನಿಯಲ್ಲಿ ಒಟ್ಟು 578 ರನ್ ಗಳಿಸಿದ್ದಾರೆ. 2007ರ ಆವೃತ್ತಿಯ ವಿಶ್ವಕಪ್‌ನಲ್ಲಿ 548 ರನ್ ಗಳಿಸಿದ್ದ ಶ್ರೀಲಂಕಾದ ನಾಯಕ ಜಯವರ್ಧನೆ ದಾಖಲೆಯನ್ನು ಮುರಿದರು. ಆಸ್ಟ್ರೇಲಿಯದ ರಿಕಿ ಪಾಂಟಿಂಗ್(2007, 539 ರನ್), ಆ್ಯರೊನ್ ಫಿಂಚ್(507,2019) ಆ ಬಳಿಕದ ಸ್ಥಾನದಲ್ಲಿದ್ದಾರೆ.

ವಿಶ್ವಕಪ್ ಟೂರ್ನಿಯುದ್ದಕ್ಕೂ ವಿಲಿಯಮ್ಸನ್ ಅತ್ಯುತ್ತಮ ಪ್ರದರ್ಶನ ನೀಡಿದ್ದು, 2 ಶತಕ ಹಾಗೂ 2 ಅರ್ಧಶತಕ ಗಳಿಸಿದ್ದಾರೆ. ವೆಸ್ಟ್‌ಇಂಡೀಸ್ ವಿರುದ್ಧ ಗರಿಷ್ಠ 148 ರನ್ ಗಳಿಸಿದ್ದರು.

ವಿಶ್ವಕಪ್ ಟೂರ್ನಿಯೊಂದರಲ್ಲಿ ಗರಿಷ್ಠ ರನ್ ಗಳಿಸಿದ ದಾಖಲೆ ಭಾರತದ ಸಚಿನ್ ತೆಂಡುಲ್ಕರ್ ಹೆಸರಲ್ಲಿದೆ. ಅವರು 2003ರ ವಿಶ್ವಕಪ್‌ವೊಂದರಲ್ಲಿ 673 ರನ್ ಗಳಿಸಿದ್ದರು. 2007ರ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯದ ಮ್ಯಾಥ್ಯೂ ಹೇಡನ್(659, 2007)ಸಚಿನ್ ಸಾಧನೆಯ ಸಮೀಪ ತಲುಪಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News