ಮೂರು ದಿನಗಳಲ್ಲಿ ರಾಜ್ಯದ ರಾಜಕೀಯ ಚಿತ್ರಣವೇ ಬದಲಾಗಲಿದೆ: ಬಿಎಸ್‌ವೈ

Update: 2019-07-14 14:30 GMT

ಬೆಂಗಳೂರು, ಜು. 14: ಇನ್ನೂ ಮೂರು ದಿನಗಳಲ್ಲಿ ರಾಜ್ಯದ ರಾಜಕೀಯ ಚಿತ್ರಣವೇ ಬದಲಾಗಲಿದೆ ಎಂದು ವಿಪಕ್ಷ ನಾಯಕರೂ ಆಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಹೇಳಿದ್ದಾರೆ.

ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ರಾಜ್ಯದ ಜನರ ಸೇವೆ ಮಾಡುವ ಅವಕಾಶ ದೊರೆಯಲಿದೆ. ರಾಜೀನಾಮೆ ನೀಡಿ ಮುಂಬೈನಲ್ಲಿರುವ ಎಲ್ಲ ಶಾಸಕರು ಒಗ್ಗಟ್ಟಾಗಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಅತೃಪ್ತ ಶಾಸಕರು ನಿರಾಕರಿಸಿದ್ದು, ಈ ಪರಿಸ್ಥಿತಿ ಬಿಜೆಪಿಗೆ ಅನುಕೂಲವಾಗಲಿದೆ ಎಂದು ಯಡಿಯೂರಪ್ಪ ಇದೇ ಸಂದರ್ಭದಲ್ಲಿ ಭರವಸೆ ವ್ಯಕ್ತಪಡಿಸಿದರು.

ವಿಶ್ವಾಸ ಮತ ಯಾಚನೆಗೆ ಒತ್ತಾಯ: ಸುಪ್ರೀಂ ಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ವಿಧಾನ ಮಂಡಲ ಕಲಾಪ ನಡೆದಂತೆ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಒತ್ತಾಯಿಸಲಾಗುವುದು. ಅಲ್ಲದೆ, ನಾಳೆಯೇ ವಿಶ್ವಾತಮತ ಯಾಚನೆಗೆ ಆಗ್ರಹಿಸಲು ಬಿಜೆಪಿ ತೀರ್ಮಾನಿಸಿದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News