ಸಮಾಜದ ಎಲ್ಲಾ ವರ್ಗಕ್ಕೂ ಸಮಾನ ಸೇವೆ ದೊರೆಯಲಿ: ಆನೆಗುಂದಿ ಶ್ರೀ

Update: 2019-07-14 14:57 GMT

ಉಡುಪಿ, ಜು.14: ಸೇವೆ ಎಂಬುದು ಸಮಾಜದ ಎಲ್ಲಾ ವರ್ಗದ ಜನರಿಗೂ ಸಮಾನವಾಗಿ ದೊರೆಯಬೇಕು. ಸಮಾಜದಲ್ಲಿರುವ ದುರ್ಬಲರ ಅಶಕ್ತರ ಸೇವೆ ಮಾಡಿದರೆ ಅದುವೇ ನಿಜವಾದ ಗುರುಗಳ ಸೇವೆ ಎಂದು ಜಗದ್ಗುರು ಆನೆಗುಂದಿ ಮಹಾಸಂಸ್ಥಾನದ ಶ್ರೀಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ಹೇಳಿದ್ದಾರೆ.

ಉಡುಪಿ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ರವಿವಾರ ಉಡುಪಿ ವಲಯದ ಗುರುಸೇವಾ ಪರಿಷತ್ ಸಂಘಟನೆಯನ್ನು ಉದ್ಘಾಟಿಸಿ ಅವರು ಮಾತನಾಡು ತ್ತಿದ್ದರು. ಈ ಸಂಸ್ಥೆಯು ಕಿರಿಯರ ಸೇವೆ ಮಾಡುವ ಮೂಲಕ ದೊಡ್ಡ ಸೇವಾ ಸಂಸ್ಥೆಯಾಗಿ ಬೆಳೆಯಬೇಕು ಎಂದು ಅವರು ಹಾರೈಸಿದರು.

ಜ್ಯೋತಿಷ್ಯ ವಿದ್ವಾನ್ ಉಮೇಶ್ ಆಚಾರ್ಯ ಪಡೀಲ್ ಧಾರ್ಮಿಕ ಉಪನ್ಯಾಸ ನೀಡಿದರು. ಸಂಘದ ಅಧ್ಯಕ್ಷ ಸುಧಾಕರ ಆಚಾರ್ಯ, ಮಹಾ ಸಂಸ್ಥಾನದ ಅಧ್ಯಕ್ಷ ಸೂರ್ಯಕುಮಾರ್, ಗುರು ಸೇವಾ ಪರಿಷತ್ ಅಧ್ಯಕ್ಷ ಮಧು ಆಚಾರ್ಯ ಮುಲ್ಕಿ, ರಾಷ್ಟ್ರೀಯ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಒಳಕಾಡು, ಉಡುಪಿ ತಾಲೂಕು ಕಾರ್ಪೆಂಟರ್ ಯೂನಿಯನ್ ಅಧ್ಯಕ್ಷ ಗೋಕುಲ್ ಆಚಾರ್ಯ ನಿಟ್ಟೂರು, ಜಿಲ್ಲಾ ಚಿನ್ನಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷ ಕಿಶೋರ್ ಆಚಾರ್ಯ ಗುಂಡಿಬೈಲ್, ಗುರು ಸೇವಾ ಪರಿಷತ್ ಗೌರವಾಧ್ಯಕ್ಷ ಗೋಪಾಲಕೃಷ್ಣ ಆಚಾರ್ಯ ಉಪಸ್ಥಿತರಿದ್ದರು.

ಕಾರ್ಯದರ್ಶಿ ಪಿ.ವಿ.ನಾಗರಾಜ ಆಚಾರ್ಯ ಸ್ವಾಗತಿಸಿದರು. ಲೋಕೇಶ್ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ವೆಂಕಟೇಶ್ ಆಚಾರ್ಯ ವಂದಿಸಿದರು. ಹರೀಶ್ ಆಚಾರ್ಯ ಮತ್ತು ಹರೀಶ್ಚಂದ್ರ ಆಚಾರ್ಯ ಕಾರ್ಯ ಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News