ಬಾಕಿ ಇದ್ದ 4 ಲಕ್ಷ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ಬಿಡುಗಡೆ

Update: 2019-07-14 15:07 GMT

ಬೆಂಗಳೂರು, ಜು. 14: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯ ಶಾಲೆಗಳಲ್ಲಿ 2018-19 ಸಾಲಿನಲ್ಲಿ ಅಭ್ಯಾಸ ಮಾಡುತ್ತಿದ್ದ 4 ಲಕ್ಷ ಮಂದಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಬಾಕಿ ಉಳಿದಿದ್ದ ವಿದ್ಯಾರ್ಥಿ ವೇತನ ಬಿಡುಗಡೆಗೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ. 

ವಿದ್ಯಾರ್ಥಿ ವೇತನ ಬಿಡುಗಡೆ ಹಿನ್ನಲೆಯಲ್ಲಿ ಪ್ರಸಕ್ತ ಸಾಲಿಗೆ ವಿದ್ಯಾರ್ಥಿಗಳಿಗೆ ಶಾಲಾ ಪ್ರವೇಶ ಶುಲ್ಕು ಭರಿಸಲು ಅನುಕೂಲವಾಗಲಿದೆ ಎಂದು ತಿಳಿಸಲಾಗಿದೆ. ಅಲ್ಲದೆ, ಪ್ರಾಥಮಿಕ, ಪ್ರೌಢಶಾಲೆಗಳು ಸೇರಿದಂತೆ ಇನ್ನು ಉಳಿದ ವಿದ್ಯಾರ್ಥಿಗಳಿಗೆ ಕೇಂದ್ರ ಸರಕಾರ ಕೂಡಲೇ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕೆಂದು ಕೋರಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News