ಹೂಡೆ: ಹದಿಹರೆಯದ ಕೌಶಲಗಳ ಕುರಿತು ಉಪನ್ಯಾಸ

Update: 2019-07-15 15:16 GMT

ಉಡುಪಿ, ಜು.15: ಇಂಟರ್ ನ್ಯಾಷನಲ್ ಅಸೋಸಿಯೇಶನ್ ಆಫ್ ಲಯನ್ಸ್ ಕ್ಲಬ್, ಲಯನ್ಸ್ ಹಾಗೂ ಲಿಯೋ ಕ್ಲಬ್ ಉಡುಪಿ - ಇಂದ್ರಾಳಿ ಇವುಗಳ ಸಂಯುಕ್ತ ಆಶ್ರಯದಲ್ಲಿ ತೋನ್ಸೆ ಹೂಡೆಯ ಸಾಲಿಹಾತ್ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಿಗಾಗಿ ಹದಿಹರೆಯದ ಕೌಶಲಗಳ ಕುರಿತ ಉಪನ್ಯಾಸ ಮಾಲಿಕೆಯು ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸಹಾಯಕ ಪ್ರೊಫೆಸರ್ ಡಾ. ಅಪೇಕ್ಷಾ ರಾವ್ ಮಾತನಾಡಿ, ಹೆಣ್ಣು ಮಕ್ಕಳು ಸಮಯಕ್ಕೆ ಸರಿಯಾಗಿ ಆಹಾರ ಕ್ರಮಗಳನ್ನು ರೂಢಿಸಿಕೊಳ್ಳಬೇಕು. ಆಗ ಮಾತ್ರ ದೈಹಿಕವಾಗಿ ಆರೋಗ್ಯ ವಂತರಾಗಿರಲು ಸಾಧ್ಯ. ದೈಹಿಕವಾಗಿ ಆರೋಗ್ಯವಂತರಾದರೆ ಮಾನಸಿಕವಾಗಿ ಸದೃಢರಾಗಲು ಸಾಧ್ಯ ಎಂದು ಹೇಳಿದರು.

ವೇದಿಕೆಯಲ್ಲಿ ಶಿಕ್ಷಣ ಸಂಸ್ಥೆಯ ಟ್ರಸ್ಟಿ ಎಂ.ಎ. ಮೌಲಾ, ಹೃಷಿಕೇಷ್ ಹೆಗ್ಡೆ, ಫೌಜಾನ್ ಅಕ್ರಂ, ಪ್ರೇರಣಾ ಹೆಗ್ಡೆ, ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಸ್ಲಂ ಹೈಕಾಡಿ, ಶಾಲಾ ಮುಖ್ಯೋಪಾಧ್ಯಾಯಿನಿ ಸುನಂದಾ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News