​ಗುರಿ ನಿಗದಿಪಡಿಸಿ ಕಾರ್ಯಕ್ರಮ ರೂಪಿಸಿ: ಉಡುಪಿ ಜಿಲ್ಲಾಧಿಕಾರಿ

Update: 2019-07-15 15:47 GMT

ಉಡುಪಿ, ಜು.15: ಜಿಲ್ಲೆಯಲ್ಲಿ ಇಂದಿನಿಂದ 27ವರೆಗೆ ನಡೆಯುವ ಪರಿಷ್ಕೃತ ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದಡಿ ಕ್ಷಯರೋಗದ ಪತ್ತೆ ಹಚ್ಚುವಿಕೆ ಚಟುವಟಿಕೆಗಳಲ್ಲಿ ನಿರ್ದಿಷ್ಟವಾದ ಗುರಿಯನ್ನು ಸಿದ್ಧಪಡಿಸಿಕೊಂಡು ಕಾರ್ಯಕ್ರಮವನ್ನು ರೂಪಿಸುವಂತೆ ಹಾಗೂ ದಿನ ನಿತ್ಯ ನಡೆಯುವ ಚಟುವಟಿಕೆ ಗಳ ವರದಿಯನ್ನು ತಯಾರಿಸುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಕಾರ್ಯಪಡೆ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯ ಆರೋಗ್ಯ ಕೇಂದ್ರ ಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳ ಕುರಿತು ಮಾಹಿತಿ ಹಾಗೂ ಕ್ಷಯರೋಗ ಪತ್ತೆ ಹಚ್ಚುವಿಕೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಮಾಹಿತಿ ಪಡೆದ ಅವರು, ಆರೋಗ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಕ್ರಿಯಾತ್ಮಕ ವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದರು.

ಜೊತೆಗೆ ಜಿಲ್ಲೆಯ ಆರೋಗ್ಯ ಕೇಂದ್ರಗಳಲ್ಲಿರುವ ಸಿಬ್ಬಂದಿಗಳು, ಆರೋಗ್ಯ ಸೇವೆಗಳು ಹಾಗೂ ರೋಗಿಗಳ ಬಗ್ಗೆ ಸ್ಪಷ್ಟವಾದ ಮಾಹಿತಿಗಳನ್ನು ಹೊಂದಿರಬೇಕು ಎಂದರು.

ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಾಂಗಣದಲ್ಲಿನಡೆದಜಿಲ್ಲಾಕಾರ್ಯಪಡೆಸೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯ ಆರೋಗ್ಯ ಕೇಂದ್ರ ಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳ ಕುರಿತು ಮಾಹಿತಿ ಹಾಗೂ ಕ್ಷಯರೋಗ ಪತ್ತೆ ಹಚ್ಚುವಿಕೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಮಾಹಿತಿ ಪಡೆದ ಅವರು, ಆರೋಗ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಕ್ರಿಯಾತ್ಮಕ ವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದರು.

ಜೊತೆಗೆ ಜಿಲ್ಲೆಯ ಆರೋಗ್ಯ ಕೇಂದ್ರಗಳಲ್ಲಿರುವ ಸಿಬ್ಬಂದಿಗಳು, ಆರೋಗ್ಯ ಸೇವೆಗಳು ಹಾಗೂ ರೋಗಿಗಳ ಬಗ್ಗೆ ಸ್ಪಷ್ಟವಾದ ಮಾಹಿತಿಗಳನ್ನು ಹೊಂದಿರಬೇಕು ಎಂದರು. ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಚಿದಾನಂದ ಸಂಜು ಕ್ಷಯ ರೋಗ ಪತ್ತೆ ಹಚ್ಚುವಿಕೆಯ ಕುರಿತು ನಡೆಯಲಿರುವ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.

ಅಭಿಯಾನದ ಮೂಲಕ ಕ್ಷಯರೋಗ ಹರಡುವ ಸಾಧ್ಯತೆ ಇರುವ ಅಪಾಯಕಾರಿ ಪ್ರದೇಶಗಳ ಮನೆಮನೆಗೆ ಭೇಟಿ ನೀಡಿ, ಕ್ಷಯರೋಗ ಪತ್ತೆ ಹಚ್ಚುವುದು ಹಾಗೂ ರೋಗದ ಲಕ್ಷಣಗಳು ಕಂಡು ಬಂದಲ್ಲಿ ಅವರನ್ನು ತಪಾಸಣೆಗೆ ಒಳಪಡಿಸಿ, ಖಚಿತ ಪಡಿಸಿಕೊಂಡು ಚಿಕಿತ್ಸೆ ನೀಡುವುದಾಗಿ ವಿವರಿಸಿದರು.

ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಚಿದಾನಂದ ಸಂಜು ಕ್ಷಯ ರೋಗ ಪತ್ತೆ ಹಚ್ಚುವಿಕೆಯ ಕುರಿತು ನಡೆಯಲಿರುವ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಅಭಿಯಾನದ ಮೂಲಕ ಕ್ಷಯರೋಗ ಹರಡುವ ಸ್ಯಾತೆಇರುವಅಪಾಯಕಾರಿಪ್ರದೇಶಗಳಮನೆಮನೆಗೆೇಟಿ ನೀಡಿ, ಕ್ಷಯರೋಗ ಪತ್ತೆ ಹಚ್ಚುವುದು ಹಾಗೂ ರೋಗದ ಲಕ್ಷಣಗಳು ಕಂಡು ಬಂದಲ್ಲಿ ಅವರನ್ನು ತಪಾಸಣೆಗೆ ಒಳಪಡಿಸಿ, ಖಚಿತ ಪಡಿಸಿಕೊಂಡು ಚಿಕಿತ್ಸೆ ನೀಡುವುದಾಗಿ ವಿವರಿಸಿದರು.

ಪ್ರಸಕ್ತ ವರ್ಷದ ಜ.2ರಿಂದ 14ರವರೆಗೆ ನಡೆದ ದ್ವಿತೀಯ ಹಂತದ ಕಾರ್ಯ ಕ್ರಮದಲ್ಲಿ 1,40,838 ಮಂದಿಯನ್ನು ಪರೀಕ್ಷಿಸಲಾಗಿದ್ದು, ಕಫ ಪರೀಕ್ಷೆಯಲ್ಲಿ 19 ಮಂದಿಗೆ ಕ್ಷಯರೋಗದ ಗುಣಲಕ್ಷಣಗಳು ಕಂಡು ಬಂದಿದ್ದವು, ಇವರಲ್ಲಿ 4 ಮಂದಿಯಲ್ಲಿ ಕ್ಷಯರೋಗ ಪತ್ತೆ ಮಾಡಿದ್ದು ಒಟ್ಟು 23 ಕ್ಷಯರೋಗದ ಪ್ರಕರಣವನ್ನು ಕಳೆದ ಬಾರಿ ಪತ್ತೆ ಹಚ್ಚಲಾಗಿದೆ. ಈ ಬಾರಿ ತೃತೀಯ ಹಂತದ ಕಾರ್ಯಕ್ರಮದಲ್ಲಿ 403 ತಂಡಗಳು ಹಾಗೂ 806 ಮಂದಿ ಸಿಬ್ಬಂದಿಗಳು ಭಾಗವಹಿಸಲಿದ್ದು, ವಿವಿಧ ಚಟುವಟಿಕೆಗಳನ್ನು ನಡೆಸುವುದಾಗಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಂ.ಜಿ.ರಾಮ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಮರಾವ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News