ಮಲ್ಪೆ: ಸಕ್ರೀಯ ಕ್ಷಯರೋಗ ಪತ್ತೆ, ಚಿಕಿತ್ಸಾ ಆಂದೋಲನಕ್ಕೆ ಚಾಲನೆ

Update: 2019-07-15 15:52 GMT

ಮಲ್ಪೆ, ಜು.15: ಮೂರನೇ ಸುತ್ತಿನ ಸಕ್ರೀಯ ಕ್ಷಯ ರೋಗ ಪತ್ತೆ ಹಾಗೂ ಚಿಕಿತ್ಸಾ ಆಂದೋಲನ ಕಾರ್ಯಕ್ರಮಕ್ಕೆ ಸೋಮವಾರ ಇಲ್ಲಿನ ಕೊಡವೂರಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸಾಂಕೇತಿಕವಾಗಿ ಉದ್ಘಾಟಿಸಿ ಚಾಲನೆ ನೀಡಲಾಯಿತು. ಈ ಆಂದೋಲನ ಇಂದಿನಿಂದ ಜು.27ರವರೆಗೆ ನಡೆಯಲಿದೆ.

ಕಾರ್ಯಕ್ರಮವನ್ನು ಉಡುಪಿ ಜಿಪಂ ಅಧ್ಯಕ್ಷ ದಿನಕರಬಾಬು ಉದ್ಘಾಟಿಸಿದರು. ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ ಕರಪತ್ರ ಬಿಡುಗಡೆ ಮಾಡಿದರು. ಮುಖ್ಯ ಅತಿಥಿಗಳಾಗಿ ಕೊಡವೂರಿನ ನಗರಸಭಾ ಸದಸ್ಯ ಶ್ರೀಶ ಭಟ್, ಮೂಡಬೆಟ್ಟು ಡಾ.ಬಿ.ಆರ್.ಅಂಬೇಡ್ಕರ್ ಯುವಕ ಮಂಡಲದ ಗೌರವಾಧ್ಯಕ್ಷ ಶಂಕರದಾಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಜಿ.ರಾಮ, ಉಡುಪಿ ತಾಲೂಕು ಆರೋಗ್ಯಾಧಿಕಾರಿಡಾ. ನಾಗರತ್ನ ಉಪಸ್ಥಿತರಿದ್ದರು.

ಜಿಲ್ಲಾ ಕ್ಷಯರೋಗ ನಿಯಂತ್ರಣಧಿಕಾರಿ ಡಾ.ಚಿದಾನಂದ ಸಂಜು ಎಸ್.ವಿ. ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ ಒಂದು ಮತ್ತು ಎರಡನೇ ಸುತ್ತಿನ ಸಕ್ರೀಯ ಕ್ಷಯರೋಗ ಪತ್ತೆ ಹಾಗೂ ಚಿಕಿತ್ಸಾ ಆಂದೋಲನದಲ್ಲಿ ಒಟ್ಟು 69 ಕ್ಷಯ ರೋಗಿಗಳನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡಲಾಗಿದೆ. ಮೂರು ಸುತ್ತಿನ ಸಕ್ರೀಯ ಕ್ಷಯ ರೋಗ ಪತ್ತೆ ಹಾಗೂ ಚಿಕಿತ್ಸಾ ಆಂದೋಲನದಲ್ಲಿಯೂ ಹೈ-ರಿಸ್ಕ್ ಹಾಗೂ ದುರ್ಬಲ ವರ್ಗದ ಗುಂಪುಳನ್ನು ಗುರುತಿಸಲಾಗಿಗೆ ಎಂದರು.

ಜಿಲ್ಲಾ ಕ್ಷಯರೋಗ ನಿಯಂತ್ರಣಧಿಕಾರಿ ಡಾ.ಚಿದಾನಂದ ಸಂಜು ಎಸ್.ವಿ. ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ ಒಂದು ಮತ್ತು ಎರಡನೇ ಸುತ್ತಿನ ಸಕ್ರೀಯ ಕ್ಷಯರೋಗ ಪತ್ತೆ ಹಾಗೂ ಚಿಕಿತ್ಸಾ ಆಂದೋಲನದಲ್ಲಿ ಒಟ್ಟು 69 ಕ್ಷಯ ರೋಗಿಗಳನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡಲಾಗಿದೆ.

ಮೂರು ಸುತ್ತಿನ ಸಕ್ರೀಯ ಕ್ಷಯ ರೋಗ ಪತ್ತೆ ಹಾಗೂ ಚಿಕಿತ್ಸಾ ಆಂದೋಲನದಲ್ಲಿಯೂ ಹೈ-ರಿಸ್ಕ್ ಹಾಗೂ ದುರ್ಬಲ ವರ್ಗದ ಗುಂಪುಗಳನ್ನು ಗುರುತಿಸಲಾಗಿಗೆ ಎಂದರು. ರೋಗಿಗಳಲ್ಲಿ ಕ್ಷಯರೋಗ ಲಕ್ಷಣವಿದ್ದಲ್ಲಿ ಕಫ ಪರೀಕ್ಷೆ, ಕ್ಷ-ಕಿರಣ ಪರೀಕ್ಷೆ ಹಾಗೂ ಸಿಬಿಎನ್‌ಎಎಟಿ ಪರೀಕ್ಷೆಗೆ ಒಳಪಡಿಸಲಾಗುವುದು. 1,40,617 ಜನರನ್ನು ಕ್ಷಯರೋಗದ ಲಕ್ಷಣಗಳಿಗೆ ಮನೆಗಳಿಗೆ ಭೇಟಿ ನೀಡಿ ಪರೀಕ್ಷಿಸುವ ಗುರಿಯನ್ನು ಹೊಂದಿದ್ದೇವೆ ಎಂದರು.

ತಾಲೂಕು ಆರೋಗ್ಯಾಧಿಕಾರಿ ಡಾ.ನಾಗರತ್ನ ವಂದಿಸಿದರೆ, ಜಿಲ್ಲಾ ಖಾಸಗಿ ಹಾಗೂ ಸರಕಾರಿ ಸಂಯೋಜಿತ ಸಂಯೋಜಕರಾದ ಸುರೇಶ ಕೆ. ಸಾಲಿಗ್ರಾಮ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News