ರೋಗ ತಡೆಯಲು ನೆರವು ನೀಡಿ: ಅಂತರ್‌ರಾಷ್ಟ್ರೀಯ ಸಮುದಾಯಕ್ಕೆ ಪ್ರವಾಹ ಪೀಡಿತ ನೇಪಾಳ ಮನವಿ

Update: 2019-07-15 16:03 GMT

ಅಂತರ್‌ರಾಷ್ಟ್ರೀಯ ಸಮುದಾಯಕ್ಕೆ ಪ್ರವಾಹ ಪೀಡಿತ ನೇಪಾಳ ಮನವಿ

ಕಠ್ಮಂಡು, ಜು. 15: ನೀರಿನಿಂದ ಹರಡುವ ಸಂಭಾವ್ಯ ರೋಗಗಳನ್ನು ತಡೆಯಲು ಹಾಗೂ ಸಾವಿರಾರು ಜನರಿಗೆ ಸೂಕ್ತ ಆರೋಗ್ಯ ಸೇವೆಗಳನ್ನು ಒದಗಿಸಲು ನೆರವು ನೀಡುವಂತೆ ಪ್ರವಾಹ ಪೀಡಿತ ನೇಪಾಳ ಅಂತರ್‌ರಾಷ್ಟ್ರೀಯ ನೆರವು ಸಂಸ್ಥೆಗಳಿಗೆ ಮನವಿ ಮಾಡಿದೆ. ನೇಪಾಳದಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕನಿಷ್ಠ 60 ಮಂದಿ ಮೃತಪಟ್ಟಿದ್ದಾರೆ ಎಂದು ಮಾಧ್ಯಮ ವರದಿಗಳು ಹೇಳಿವೆ. ನೇಪಾಳದಲ್ಲಿ ಗುರುವಾರದಿಂದ ಭಾರೀ ಮಳೆ ಸುರಿಯುತ್ತಿದೆ. 25ಕ್ಕೂ ಅಧಿಕ ಜಿಲ್ಲೆಗಳು ಮತ್ತು 10,385ಕ್ಕೂ ಅಧಿಕ ಮನೆಗಳು ಸಂಕಷ್ಟಕ್ಕೆ ಗುರಿಯಾಗಿವೆ. ದೇಶದ ಮಧ್ಯ ಮತ್ತು ಪೂರ್ವ ಭಾಗಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ ಹಾಗೂ 35 ಮಂದಿ ನಾಪತ್ತೆಯಾಗಿದ್ದಾರೆ. ಪ್ರವಾಹದಿಂದ ಉಂಟಾಗಿರುವ ವಿನಾಶ ಮತ್ತು ನಷ್ಟವನ್ನು ಗಣನೆಗೆ ತೆಗೆದುಕೊಳ್ಳುವುದಕ್ಕಾಗಿ ತುರ್ತು ಸಭೆಯೊಂದನ್ನು ರವಿವಾರ ಕರೆಯಲಾಗಿತ್ತು.

ವಿಶ್ವ ಆರೋಗ್ಯ ಸಂಸ್ಥೆಯ ನೇಪಾಳ ಕಚೇರಿ, ವಿಶ್ವಸಂಸ್ಥೆಯ ಮಕ್ಕಳ ನಿಧಿ (ಯುನಿಸೆಫ್), ವಿಶ್ವಸಂಸ್ಥೆಯ ಜನಸಂಖ್ಯೆ ನಿಧಿ (ಯುಎನ್‌ಎಫ್‌ಪಿಎ) ಮತ್ತು ಇತರ ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು ಎಂದು ‘ಕಠ್ಮಂಡು ಪೋಸ್ಟ್’ ವರದಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News