ಐಎಂಎ ಹಗರಣ: ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ

Update: 2019-07-15 16:19 GMT

ಬೆಂಗಳೂರು, ಜು.15: ಐಎಂಎ ಸಂಸ್ಥೆಯ ಹಗರಣವನ್ನು ಸಿಬಿಐ ತನಿಖೆ ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಗೂ ರಿಟ್ ಅರ್ಜಿಗಳು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಸರಕಾರದ ಪರವಾಗಿ ನ್ಯಾಯಾಲಯದಲ್ಲಿ ವಾದಿಸಲು ವಕೀಲ ಬಿ.ಎನ್.ಜಗದೀಶ್ ಅವರನ್ನು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನೇಮಕ ಮಾಡಿ ಗೃಹ ಇಲಾಖೆ ಆದೇಶ ಹೊರಡಿಸಿದೆ.

ಐಎಂಎ ಸಂಸ್ಥೆಯ ಮಾಲಕ ಮುಹಮ್ಮದ್ ಮನ್ಸೂರ್ ಖಾನ್ ಕೋಟ್ಯಂತರ ರೂ.ವೌಲ್ಯದ ಚಿನ್ನಾಭರಣ ಹಾಗೂ ಹಣದ ಬಗ್ಗೆ ಯಾವುದೇ ಮಾಹಿತಿಯನ್ನೂ ನೀಡದೇ ತಲೆಮರೆಸಿಕೊಂಡಿರುವ ಹಿನ್ನೆಲೆಯಲ್ಲಿ ಹಣ ಕಳೆದುಕೊಂಡವರು ಸಿಬಿಐ ತನಿಖೆ ಕೋರಿ ನಾಲ್ಕು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಆದರೆ, ಸರಕಾರ ಈಗಾಗಲೇ ಹಗರಣದ ತನಿಖೆಯನ್ನು ವಿಶೇಷ ತನಿಖಾ ದಳ(ಎಸ್‌ಐಟಿ)ಕ್ಕೆ ನೀಡಿ ಆದೇಶಿಸಿದೆ. ಅರ್ಜಿದಾರರು ಸಿಬಿಐಗೆ ಕೋರಿ ಅರ್ಜಿ ಸಲ್ಲಿಸಿದ್ದರಿಂದ ಸರಕಾರದ ಪರವಾಗಿ ವಾದಿಸಲು ಜಗದೀಶ್ ಅವರನ್ನು ವಿಶೇಷ ಪಬ್ಲಿಕ್ ಪ್ರಾಸಿಕೂ್ಯಟರ್ ಆಗಿ ನೇಮಕ ಮಾಡಿ ಆದೇಶಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News