ಉಡುಪಿ: ವಿದ್ಯಾರ್ಥಿ ವೇತನಕ್ಕಾಗಿ ಸಿಎಫ್‌ಐಯಿಂದ ಜಾಥಾ

Update: 2019-07-15 16:22 GMT

ಉಡುಪಿ, ಜು.15: ವಿದ್ಯಾರ್ಥಿ ವೇತನವನ್ನು ಕೂಡಲೇ ವಿತರಿಸುವಂತೆ ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲೆ ಇದರ ನೇತೃತ್ವದಲ್ಲಿ ಸೋಮವಾರ ಮಣಿಪಾಲದ ಯುಪಿಎಂ ಸರ್ಕಲ್‌ನಿಂದ ರಜ ತಾದ್ರಿಯಲ್ಲಿರುವ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯವರೆಗೆ ಜಾಥಾ ನಡೆಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದ ವಿದ್ಯಾರ್ಥಿಗಳು, 2018 -19ನೆ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿ ವೇತನ ಈವರೆಗೆ ವಿತರಣೆ ಯಾಗಿಲ್ಲ. ಇದರಿಂದ ಬಡ ವಿದ್ಯಾರ್ಥಿಗಳು ಕಾಲೇಜಿನ ಶುಲ್ಕ ಪಾವತಿ ಮಾಡದೆ ತೊಂದರೆ ಒಳಗಾಗಿದ್ದಾರೆ. ಶುಲ್ಕ ಪಾವತಿಸದ ಕಾರಣಕ್ಕೆ ಪರೀಕ್ಷಾ ಪ್ರವೇಶಾತಿ ನಿರಾಕರಿಸಲಾಗಿದೆ. ಆದುದರಿಂದ ಕೂಡಲೇ ವಿದ್ಯಾರ್ಥಿ ವೇತನವನ್ನು ವಿತರಿ ಸಲು ರಾಜ್ಯ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಬಳಿಕ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸ ಲಾಯಿತು. ಈ ಸಂದರ್ಭದಲ್ಲಿ ಸಿಎಫ್‌ಐ ರಾಜ್ಯ ಸಮಿತಿ ಸದಸ್ಯ ಮುಹಮ್ಮದ್ ಸಾದಿಕ್, ಜಿಲ್ಲಾಧ್ಯಕ್ಷ ಶಫೀಕ್, ಕಾರ್ಯದರ್ಶಿ ನವಾಝ್, ಉಪಾಧ್ಯಕ್ಷ ತೌಹೀದ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News