​ಜು.16ರಿಂದ ಎಂಡೋಸಲ್ಫಾನ್ ವಿಶೇಷ ಆರೋಗ್ಯ ಶಿಬಿರ

Update: 2019-07-15 16:32 GMT

ಮಂಗಳೂರು, ಜು.15: ದ.ಕ. ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಜು.16ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆಯಲಿದೆ.

ಜು.17ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹಾಗೂ ಜು.20ರಂದು ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ಶಿಬಿರವನ್ನು ಏರ್ಪಡಿಸಲಾಗಿದೆ.

ಶಿಬಿರದ ಸದುಪಯೋಗವನ್ನು ಎಂಡೋಸಲ್ಫಾನ್ ಸಂತ್ರಸ್ತರು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News