ಜು.16: ಪಿಲಿಕುಳದಲ್ಲಿ ಗ್ರಹಣ ವೀಕ್ಷಣೆ

Update: 2019-07-15 16:33 GMT

ಮಂಗಳೂರು, ಜು.15: ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಜು.16ರಂದು ರಾತ್ರಿ ಸಂಭವಿಸುವ ಚಂದ್ರಗ್ರಹಣ ವೀಕ್ಷಿಸುವ ವ್ಯವಸ್ಥೆ ಮಾಡಲಾಗಿದೆ.

ಗುರು ಮತ್ತು ಶನಿ ಗ್ರಹಗಳನ್ನು ದೂರದರ್ಶಕದ ಮೂಲಕ ವೀಕ್ಷಿಸಬಹುದು. ಈ ಸಮಯದಲ್ಲಿ ಗ್ರಹಣಗಳ ಬಗ್ಗೆ, ನಕ್ಷತ್ರ ಸಮೂಹಗಳ ಬಗ್ಗೆ ವಿವರಣೆ ನೀಡಲಾಗುವುದು. ಗ್ರಹಣವು ರಾತ್ರಿ 1:31ಕ್ಕೆ ಆರಂಭವಾಗಿ ಬೆಳಗ್ಗೆ 4:29ರವರೆಗೆ ಇರುವುದು. ಆಕಾಶ ವೀಕ್ಷಣಾ ಕಾರ್ಯಕ್ರಮವು ರಾತ್ರಿ 10ರಿಂದ ಬೆಳಗ್ಗೆ 5 ಗಂಟೆಯವರೆಗೆ ನಡೆಯಲಿದೆ.

ಸಾರ್ವಜನಿಕರು ಮತ್ತು ಆಸಕ್ತರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ.ಕೆ.ವಿ. ರಾವ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News